ಸುದ್ದಿ ಸಂಗ್ರಹ

Home ಸುದ್ದಿ ಸಂಗ್ರಹ

ಶಾಸಕ ಎಂಪಿಆರ್‌ಗೆ ವಿಶೇಷ ಕೊರೊನಾ ವಾರಿಯರ್ಸ್ ಪ್ರಶಸ್ತಿ

ಹೊನ್ನಾಳಿ : ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ದಿಂದ ನಾಳೆ ದಿನಾಂಕ 16ರ ಸೋಮ ವಾರ ಬೆಳಗ್ಗೆ 11 ಗಂಟೆಗೆ ಪುರಸಭಾ ಸಭಾಭವನದಲ್ಲಿ ಹಮ್ಮಿಕೊಂಡಿರುವ ಪತ್ರಿಕಾ ದಿನಾಚರಣೆಯನ್ನು ಶಾಸಕ ಎಂ.ಪಿ.ರೇಣುಕಾಚಾರ್ಯ ಉದ್ಘಾಟಿಸಲಿದ್ದಾರೆ.

ಅನಾಥ ಮಕ್ಕಳ ಶಿಕ್ಷಣಕ್ಕೆ 1.25 ಲಕ್ಷ ರೂ. ನೀಡಿ ಮಾನವೀತೆ ಮೆರೆದ ಶಾಸಕರು

ಜಗಳೂರು ಪಟ್ಟಣದಲ್ಲಿ ಕೊರೊನಾದಿಂದ ತಂದೆ-ತಾಯಿ ಯನ್ನು ಕಳೆದುಕೊಂಡು ಅನಾಥರಾದ ಇಬ್ಬರು ಮಕ್ಕಳ ಶಿಕ್ಷಣಕ್ಕೆ ಸಭೆಯಲ್ಲಿ 1.25 ಲಕ್ಷ ರೂ. ಸ್ವಂತ ಹಣ ನೀಡಿದ ಶಾಸಕ ರಾಮಚಂದ್ರ ಮಾನವೀಯತೆ ಮೆರೆದಿದ್ದಾರೆ.

ಅವಳಿ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ನಗರದ ಮಾಗನೂರು ಬಸಪ್ಪ ಪ್ರೌಢಶಾಲೆಗೆ ಕಳೆದ ಸಾಲಿನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅವಳಿ ಸಹೋದರರಾದ ಎಂ.ಎಸ್‌ ಸಾಗರ ಹಾಗೂ ಎಂ.ಎಸ್‌. ಸೂರಜ್‌ ಇಬ್ಬರೂ 625 ಅಂಕಗಳಿಗೆ 623 ಅಂಕಗಳನ್ನು ಗಳಿಸುವುದರ ಮೂಲಕ ರಾಜ್ಯಕ್ಕೆ ಮತ್ತು ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ದೇವಿಕಾ ಶಾಲೆಗೆ ಶೇ.100 ಫಲಿತಾಂಶ

ಜಿಲ್ಲೆಯಲ್ಲಿ ಭಾನುವಾರ 15 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಒಬ್ಬರು ಮೃತಪಟ್ಟಿದ್ದಾರೆ. 15 ಜನರು ಗುಣಮುಖ ರಾಗಿದ್ದಾರೆಂದು ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದೆಹಲಿ ಪ್ರತಿಭಟನೆಗೆ ನಗರದಿಂದ ಕಾಂಗ್ರೆಸ್ ಪ.ಜಾತಿ ಮುಖಂಡರು

ಕೇಂದ್ರದ ಬಿಜೆಪಿ ಸರ್ಕಾರದ ದಲಿತ ಮತ್ತು ಆದಿವಾಸಿಗಳ ವಿರೋಧಿ ಆಡಳಿತ ಖಂಡಿಸಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ಡಾ. ನಿತಿನ್ ರಾವತ್ ನೇತೃತ್ವದಲ್ಲಿ ನಾಡಿದ್ದು ದಿನಾಂಕ 12 ರ ಗುರುವಾರ ದೆಹಲಿ ಜಂತರ್ ಮಂತರ್‌ನಲ್ಲಿ ನಡೆ ಯುವ ಪ್ರತಿಭಟನೆಯಲ್ಲಿ ಭಾಗವಹಿಸಲು ನಗರದಿಂದ 25 ಜನ ತೆರಳಲಿದ್ದಾರೆ

ವಾಣಿಜ್ಯ ಉದ್ದಿಮೆಗಳ ತ್ಯಾಜ್ಯ ಸಂಗ್ರಹ, ವಿಲೇವಾರಿ ಜವಾಬ್ದಾರಿ ಸ್ವಯಂ ಸೇವಾ ಸಂಸ್ಥೆಗಳಿಗೆ

ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ವಾರ್ಡ್‌ಗಳಲ್ಲಿ ವಾಣಿಜ್ಯ ಉದ್ದಿಮೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಮರ್ಪಕವಾಗಿ ಸಂಗ್ರಹಿಸಿ ವಿಲೇವಾರಿ ಮಾಡುವ ಕಾರ್ಯವನ್ನು ಆಯ್ದ ಸ್ವಯಂ ಸೇವಾ ಸಂಸ್ಥೆಗಳಿಗೆ ವಹಿಸಲಾಗಿದೆ

ವಿದ್ಯುತ್ ತಿದ್ದುಪಡಿ ಮಸೂದೆ 2021ಕ್ಕೆ ರೈತ ಸಂಘಟನೆ ವಿರೋಧ: ಪ್ರತಿಭಟನೆ

ವಿದ್ಯುತ್ ತಿದ್ದುಪಡಿ ಮಸೂದೆ 2021ನ್ನು ವಿರೋಧಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಮಿತಿ ವತಿಯಿಂದ ನಗರದ ಜಯದೇವ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಲಾಯಿತು. 

ಶ್ರದ್ಧಾ – ಭಕ್ತಿಯಿಂದ ಭೀಮನ ಅಮಾವಾಸೆ ಆಚರಣೆ

ನಗರದಲ್ಲಿ ಇಂದು ಭೀಮನ ಅಮಾವಾಸೆಯನ್ನು ಶ್ರದ್ಧಾ -  ಭಕ್ತಿಯಿಂದ ಆಚರಿಸಲಾಯಿತು. ಆಷಾಢ ಮಾಸದ ಭೀಮನ ಅಮಾವಾಸ್ಯೆ ದಿನ ಶಕ್ತಿ ದೇವತೆಗಳ ಆರಾಧನೆ ಮಾಡುವುದರಿಂದ ಒಳ್ಳೆಯದಾಗುತ್ತದೆ

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಪತ್ರಿಕಾ ವಿತರಕ ರಾಘವೇಂದ್ರ ಸಾವು

ಮಲೇಬೆನ್ನೂರು ಪಟ್ಟಣದ ಶ್ರೀ ಲಕ್ಷ್ಮೀರಂಗನಾಥ ಬುಕ್ ಸ್ಟಾಲ್ ಮಾಲೀಕರೂ, ವಿವಿಧ ಪತ್ರಿಕೆಗಳ ವಿತರಕರೂ ಆಗಿದ್ದ ವಿ.ರಾಘವೇಂದ್ರ (55) ಅವರು ಭಾನುವಾರ ಸಂಜೆ ನಿಧನರಾಗಿದ್ದಾರೆ. 

ಜಿಲ್ಲೆಯಲ್ಲಿ ಮೂವರಿಗೆ ಪಾಸಿಟಿವ್,19 ಗುಣಮುಖ

ಜಿಲ್ಲೆಯಲ್ಲಿ ಶುಕ್ರವಾರ 3 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 19 ಜನರು ಗುಣಮುಖರಾಗಿದ್ದಾರೆಂದು ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸ ಲಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 2 ಹಾಗೂ ಹರಿಹರದಲ್ಲಿ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಚಾಲನಾ ಅನುಜ್ಞಾ ಪತ್ರಗಳಿಗೆ ಸ್ಲಾಟ್‌ ನಿಗದಿಗೆ ಸೂಚನೆ

ಲಾಕ್‌ಡೌನ್ ಅವಧಿಯಲ್ಲಿ ನಿಗದಿಯಾಗಿದ್ದ ಚಾಲನಾ ಅನುಜ್ಞಾ ಪತ್ರಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಕಳೆದ ಜೂನ್ 21 ರಿಂದ ಇಲ್ಲಿಯವರೆಗೆ ವಿಲೇವಾರಿ ಮಾಡಲಾಗಿದೆ.

ಹರಿಹರ ತಾ.ನಲ್ಲಿ ಕೊರೊನಾ ನಿಯಂತ್ರಣ

ಹರಿಹರ ತಾಲ್ಲೂಕಿನಲ್ಲಿ ಕೊರೊನಾ ರೋಗವು ಸಂಪೂರ್ಣವಾಗಿ ನಿಯಂತ್ರಣದಲ್ಲಿದ್ದು, ಇಂದು ಒಬ್ಬರಿಗೆ ಮಾತ್ರ ಕೊರೊನಾ ರೋಗವು ದೃಢಪಟ್ಟಿದ್ದು, ಒಟ್ಟಾರೆಯಾಗಿ ಇಲ್ಲಿಯವರೆಗೆ 18 ಪ್ರಕರಣ ಗಳು ಇರುವುದಾಗಿ ತಾಲ್ಲೂಕು ವೈದ್ಯಾಧಿಕಾರಿ ಡಾ. ಚಂದ್ರಮೋಹನ್ ತಿಳಿಸಿದರು.

ಬಿಜೆಪಿ ಕಚೇರಿಯಲ್ಲಿ ಗುರು ನಮನ

ರಾಣೇಬೆನ್ನೂರು : ಗುರು ಪೂರ್ಣಿಮೆ ನಿಮಿತ್ತ ಬಿಜೆಪಿ ಕಚೇರಿಯಲ್ಲಿ ನಿವೃತ್ತ ಗುರುಗಳಾದ ಸೋಮಶೇಖರ್ ದುರ್ಗದಸೀಮಿ, ಎಸ್.ಎಸ್. ಸಿರಿ ಮತ್ತು ಜಾನಪದ ವಿವಿಯ ಮಾಲತೇಶ ಗರಡಿಮನಿ ಅವರನ್ನು ಗೌರವಿಸಲಾಯಿತು.

ನಾರಾಯಣ ಸ್ವಾಮಿಗೆ ಸಚಿವ ಸ್ಥಾನಕ್ಕೆ ಆಗ್ರಹ

ವಿಧಾನ ಪರಿಷತ್ ಸದಸ್ಯ ಡಾ. ವೈ.ಎ. ನಾರಾಯಣಸ್ವಾಮಿ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸ್ಥಾನ ನೀಡಬೇಕೆಂದು ಡಾ. ವೈ.ಎ.ಎನ್ ಬಳಗದ ಸಂಚಾಲಕ ಬಿ.ಎನ್.ರಾಮರೆಡ್ಡಿ ಒತ್ತಾಯಿಸಿದ್ದಾರೆ.

ಕೋವಿಡ್ ಸೆಂಟರ್‌ಗಳಾಗಿದ್ದ ವಿದ್ಯಾರ್ಥಿ ನಿಲಯಗಳ ಸ್ವಚ್ಛಕ್ಕೆ ಆಗ್ರಹ

ಕೋವಿಡ್ ಸೆಂಟರ್ ಗಳನ್ನಾಗಿ ಬಳಸಿದ ವಿದ್ಯಾರ್ಥಿ ನಿಲಯಗಳನ್ನು ಸ್ವಚ್ಛಗೊಳಿಸುವಂತೆ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಗೋವಿಂದ್ ಹಾಲೇಕಲ್ಲು ಅವರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

10 ಪಾಸಿಟಿವ್, 22 ಗುಣಮುಖ

ಜಿಲ್ಲೆಯಲ್ಲಿ ಗುರುವಾರ 10 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 22 ಜನರು ಗುಣಮುಖರಾಗಿದ್ದಾರೆಂದು ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಸ್ಟಿಗೆ ಸಚಿವಾಲಯ : ಶ್ರೀ ಸಂತಸ

ಮಲೇಬೆನ್ನೂರು : ರಾಜ್ಯದಲ್ಲಿ ಪರಿಶಿಷ್ಟ ಪಂಗಡ ಸಮುದಾಯದ ಬಹುದಿನಗಳ ಬೇಡಿಕೆಯಂತೆ ಎಸ್‌ಟಿಪಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಪೂರಕವಾಗಿ ಪ್ರತ್ಯೇಕ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವಾಲಯ ಸ್ಥಾಪನೆಗೆ ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನ ಗೊಂಡಿರುವುದನ್ನು ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಸ್ವಾಗತಿಸಿದ್ದಾರೆ.

ಕಾನೂನು ಪದವೀಧರರ ಶಿಷ್ಯ ವೇತನ

ಹಿಂದುಳಿದ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಗೆ ಈ ಸಾಲಿನ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಅರ್ಹ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ಯಾಸೆಂಜರ್ ರೈಲುಗಳ ಸಂಚಾರ ಆರಂಭಕ್ಕೆ ಶಾಸ್ತ್ರಿ ಒತ್ತಾಯ

ಇಂಟರ್‌ಸಿಟಿ ರೈಲುಗಳ ಸಂಚಾರವನ್ನು ಆರಂಭಿಸುವಂತೆ ನೈರುತ್ಯ ರೈಲ್ವೆ ವಲಯದ ಜನರಲ್ ಮ್ಯಾನೇಜರ್ ಹಾಗೂ ಕೇಂದ್ರ ರೈಲ್ವೆ ಸಚಿವರಲ್ಲಿ ನೈರುತ್ಯ ರೈಲ್ವೆ ವಲಯ ಪ್ರಯಾಣಿಕರ ಕುಂದು-ಕೊರತೆ ನಿವಾರಣೆ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಂ.ಎಸ್.ಕೆ. ಶಾಸ್ತ್ರಿ ಮನವಿ ಮಾಡಿದ್ದಾರೆ.

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ

ಬಿ.ಇಡಿ ಮತ್ತು ಡಿ.ಇಡಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಕಲಿಕಾ ಮತ್ತು ಬೋಧನಾ ಸಾಮಗ್ರಿಗಳನ್ನು ಖರೀದಿಸಲು ಆರ್ಥಿಕ ಸಹಾಯ ಮಾಡುವ ಹಿತದೃಷ್ಟಿಯಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ರೈಲ್ವೆ ಸೀಸನ್ ಟಿಕೆಟ್‌ಗೆ ಚಾಲನೆ

ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ರೈಲ್ವೆಯ ಸೀಸನ್ ಟಿಕೆಟ್‌ಗೆ ಮತ್ತೆ ಚಾಲನೆ ನೀಡಲಾಗಿದೆ ಎಂದು ರೈಲ್ವೆ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದ್ವಿತೀಯ ಪಿಯುಸಿ ಸಿಬಿಎಸ್‍ಇ ಪರೀಕ್ಷೆಯಲ್ಲಿ ಅಶ್ವಿನಿ ಬಿಹಾರ್‌ ರಾಜ್ಯಕ್ಕೇ ಟಾಪರ್

ಹರಪನಹಳ್ಳಿ : ಪಟ್ಟಣದ ವಾಲ್ಮೀಕಿ ನಗರದ ನಿವಾಸಿ ವೈ. ಅರುಣ ಕುಮಾರ್‌ ಅವರ ಪುತ್ರಿ ವೈ. ಅಶ್ವಿನಿ ದ್ವಿತೀಯ ಪಿಯುಸಿ ಸಿಬಿಎಸ್‍ಇ ಪರೀಕ್ಷೆಯಲ್ಲಿ 500ಕ್ಕೆ 495 ಅಂಕ ಪಡೆದು  ಶೇ. 99 ರಷ್ಟು ಫಲಿತಾಂಶ ಪಡೆದು ಬಿಹಾರದ ಪಾಟ್ನಾ ವಿಭಾಗಕ್ಕೆ  ಪ್ರಥಮ ಸ್ಥಾನ ಪಡೆದಿದ್ದಾರೆ. 

ನಿಧಾನ ಗತಿಯಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿ

ಮಹಾನಗರ ಪಾಲಿಕೆಯ 15, 22, 44 ನೇ ವಾರ್ಡುಗಳಿಗೆ ಸಂಬಂಧಿಸಿದ ವರ್ತುಲ ರಸ್ತೆಯಲ್ಲಿ ಸ್ಮಾರ್ಟ್‌ ಸಿಟಿ ವತಿಯಿಂದ  ಆರಂಭಿಸಿರುವ ಸಿಮೆಂಟ್‌ ರಸ್ತೆ ಕಾಮಗಾರಿಯು ಕಳೆದ 1 ವರ್ಷದಿಂದ ನಿಧಾನವಾಗಿ ಆಮೆಗತಿಯಲ್ಲಿ ನಡೆಯುತ್ತಿರುವ ಬಗ್ಗೆ ಎಂದು ನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಆಶಾ ಉಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.