ನಗರದಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯ ಮಟ್ಟದ ಸಪ್ತಾಹ

ದಾವಣಗೆರೆ, ಅ.22- ನಗರದ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಬರುವ ನವೆಂಬರ್ 16 ರಂದು 67 ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮವನ್ನು ಏರ್ಪಡಿಸಲು  ಜನತಾ ಬಜಾರ್ ಸಭಾಂಗಣದಲ್ಲಿ ಇಂದು ನಡೆದ ಪೂರ್ವ ಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

ರಾಜ್ಯದ ಸಹಕಾರ ಸಚಿವ ಸೋಮಶೇಖರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.  ಕೊರೊನಾ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ 200 ಜನರು ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಸಹಕಾರ ಸಂಘಗಳ ಜಂಟಿ ನಿಬಂಧಕ ಗುರುಸ್ವಾಮಿ ಅವರು ತಿಳಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರೂ, ದಾವಣಗೆರೆ – ಹರಿಹರ ಅರ್ಬನ್ ಬ್ಯಾಂಕ್ ಅಧ್ಯಕ್ಷ ಎನ್.ಎ.ಮುರುಗೇಶ್ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ಸಂಘಗಳು, ಸಹಕಾರ ಬ್ಯಾಂಕ್‌ಗಳು ಹೆಚ್ಚಿನ ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಡಿಸಿಸಿ ಬ್ಯಾಂಕ್ ನಿರ್ದೇಶಕರೂ, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಬಿ.ವಿ.ಚಂದ್ರಶೇಖರ್ ಅವರು, ಕಾರ್ಯಕ್ರಮ ವ್ಯವಸ್ಥಿತವಾಗಿ ನಡೆಯಲು ವಿವಿಧ ಸಮಿತಿಗಳನ್ನು ರಚಿಸಬೇಕೆಂದು ಸಲಹೆ ನೀಡಿದರು.

ಮುಖ್ಯ ಅತಿಥಿಗಳಾಗಿ ಸಹಕಾರ ಸಂಘಗಳ ಅಪರ ನಿಬಂಧಕ ಬಿ.ಎಸ್.ಹರೀಶ್, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ಟಿ.ಆನಂದ್, ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಹೆಚ್ ಬಸವರಾಜಪ್ಪ, ನಿರ್ದೇಶಕರಾದ ಎಸ್.ಬಿ.ಶಿವಕುಮಾರ್, ಬಿ.ಶೇಖರಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಜೆ.ಎಸ್.ವೇಣುಗೋಪಾಲ ರೆಡ್ಡಿ, ಕೆ.ಹೆಚ್.ಷಣ್ಮುಖಪ್ಪ, ಜಗದೀಶಪ್ಪ ಬಣಕಾರ್, ಬಿ.ಹಾಲೇಶಪ್ಪ, ಸಹಕಾರ ಇಲಾಖೆಯ ಅಧಿಕಾರಿಗಳಾದ ಬಿ.ಜಯಪ್ರಕಾಶ್, ಕೆ.ಮಹೇಶ್ವರಪ್ಪ, ಎಂ.ದಕ್ಷಿಣಾಮೂರ್ತಿ, ಡಿಸಿಸಿ ಬ್ಯಾಂಕ್ ಮುಖ್ಯಕಾರ್ಯನಿರ್ವ ಹಣಾಧಿಕಾರಿ ಎಂ.ಹೆಚ್.ಲಕ್ಷ್ಮಣ್, ಸಹಕಾರ ಮಹಾ ಮಂಡಲದ ನೋಡಲ್ ಅಧಿಕಾರಿ ಮಲ್ಲರಾಜು, ಶಿವಮೊಗ್ಗ ಸಹಕಾರಿ ಹಾಲು ಒಕ್ಕೂಟದ ಅಧಿಕಾರಿ ಕೆ.ಆರ್.ಮುರಳಿಧರ್ ಮತ್ತಿತರರು ಆಗಮಿಸಿದ್ದರು.

ಸಹಕಾರ ಅಭಿವೃದ್ಧಿ ಅಧಿಕಾರಿ ಸುರೇಂದ್ರ ಸ್ವಾಗತಿಸಿದರು. ಕಾರ್ಯಕ್ರಮವನ್ನು ಜಿಲ್ಲಾ ಸಹಕಾರ ಯೂನಿಯನ್ ವ್ಯವಸ್ಥಾಪಕ ಜಗದೀಶ್ ನಿರೂಪಿಸಿದರು. ಜಿಲ್ಲಾ ಸಹಕಾರ ಯೂನಿಯನ್ ಸಿಇಒ ಸಂತೋಷ್‌ಕುಮಾರ್ ವಂದಿಸಿದರು.