ಉಪ ಚುನಾವಣೆ ಗೆಲುವು ಬಿಜೆಪಿ ಕಾರ್ಯಕರ್ತರ ಗೆಲುವು: ಮೇಯರ್

ದಾವಣಗೆರೆ, ನ.10- ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ, ಅಭಿವೃದ್ಧಿ ಕೆಲಸಗಳನ್ನು ನೋಡಿ ಮತದಾರರು ಬಿಜೆಪಿಗೆ ಮತ ನೀಡಿದ್ದಾರೆ ಎಂದು ಪಾಲಿಕೆ ಮಹಾಪೌರರಾದ ಬಿ.ಜಿ. ಅಜಯಕುಮಾರ್‌ ತಿಳಿಸಿದ್ದಾರೆ.

ಉಪಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ವಿಶ್ವಾಸವಿಟ್ಟು ಬಿಹಾರದ ಮಹಾ ಜನತೆ ಎನ್‍ಡಿಎ ನೇತೃತ್ವದ ಸರ್ಕಾರಕ್ಕೆ ಆಶೀರ್ವಾದ ಮಾಡಿದ್ದಾರೆ ಎಂದರು.

ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕೈ ಇನ್ನಷ್ಟು ಬಲವಾಗಿದ್ದು, ಇನ್ನೂ ಎರಡೂವರೆ ವರ್ಷಗಳ ಕಾಲ ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲಿದ್ದಾರೆ ಎಂದು ಮೇಯರ್ ಅಜಯ್ ಕುಮಾರ್ ಹೇಳಿದ್ದಾರೆ.

Leave a Reply

Your email address will not be published.