ನಗರ ಪಾಲಿಕೆ ಕಾಂಗ್ರೆಸ್ ಸದಸ್ಯರಿಂದ ಭದ್ರೆಗೆ ಬಾಗಿನ

ನಗರ ಪಾಲಿಕೆ ಕಾಂಗ್ರೆಸ್ ಸದಸ್ಯರಿಂದ ಭದ್ರೆಗೆ ಬಾಗಿನ

ದಾವಣಗೆರೆ, ನ.10- ಮಹಾನಗರ ಪಾಲಿಕೆಯ ಕಾಂಗ್ರೆಸ್ ಪಕ್ಷದ ಸದಸ್ಯರು  ಜಿಲ್ಲೆಯ ಜೀವನಾಡಿ ಭದ್ರಾ ಜಲಾಶಯಕ್ಕೆ ನಿನ್ನೆ ಬಾಗಿನ ಅರ್ಪಿಸಿದರು.

ಶಾಸಕ ಡಾ|| ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಮಾರ್ಗದರ್ಶನದಲ್ಲಿ ಪಾಲಿಕೆಯ ವಿಪಕ್ಷ ನಾಯಕ ಎ.ನಾಗರಾಜ್‌ ನೇತೃತ್ವದಲ್ಲಿ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರ ಡಿ.ಬಸವರಾಜ್, ಮಹಾನಗರ ಪಾಲಿಕೆ ಸದಸ್ಯರು ಗಳಾದ ದೇವರಮನಿ ಶಿವಕುಮಾರ್, ಜಿ.ಎಸ್.ಮಂಜುನಾಥ್, ಕೆ.ಚಮನ್‍ಸಾಬ್, ಪಾಮೇನಹಳ್ಳಿ ನಾಗರಾಜ್, ಅಬ್ದುಲ್ ಲತೀಫ್, ಜಾಕೀರ್ ಅಲಿ, ವಿನಾಯಕ, ಸೈಯದ್ ಚಾರ್ಲಿ, ಜಿ.ಡಿ.ಪ್ರಕಾಶ್, ಉದಯ್ ಕುಮಾರ್, ಶಫೀಕ್ ಪಂಡಿತ್, ಶ್ರೀಮತಿ ಆಶಾ ಉಮೇಶ್, ಶ್ರೀಮತಿ ಸುಧಾ ಇಟ್ಟಿಗುಡಿ, ಶ್ರೀಮತಿ ಶ್ವೇತಾ ಶ್ರೀನಿವಾಸ್, ಶ್ರೀಮತಿ ಸವಿತಾ ಹುಲ್ಮನಿ ಗಣೇಶ್, ಮುಖಂಡ ರುಗಳಾದ ಉಮಾಶಂಕರ್, ಇಟ್ಟಿಗುಡಿ ಮಂಜು ನಾಥ್, ಹುಲ್ಮನಿ ಗಣೇಶ್ ಉಪಸ್ಥಿತರಿದ್ದರು.

Leave a Reply

Your email address will not be published.