ಅರ್ಹರಿಗೆ ಮನೆಗಳನ್ನು ನೀಡಬೇಕು

ಅರ್ಹರಿಗೆ ಮನೆಗಳನ್ನು ನೀಡಬೇಕು

ಸಂಬಂಧಿಸಿದ ಅಧಿಕಾರಿಗಳಿಗೆ ಶಾಸಕ ಕರುಣಾಕರ ರೆಡ್ಡಿ ನಿರ್ದೇಶನ

ಹರಪನಹಳ್ಳಿ, ಜ.1- ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಈ ಕ್ಷೇತ್ರದಲ್ಲಿ 10 ಸಾವಿರ ಅರ್ಜಿಗಳು ಬಂದಿದ್ದು, ಶೀಘ್ರವೇ ಮನೆಗಳು ಮಂಜೂರಾಗುತ್ತವೆ. ಮಂಜೂರಾದ ಮನೆಗಳನ್ನು ಅರ್ಹರಿಗೆ ನೀಡಬೇಕು ಎಂದು ಶಾಸಕ ಜಿ. ಕರುಣಾಕರ ರೆಡ್ಡಿ ನೂತನ ಬಿಜೆಪಿ ಬೆಂಬಲಿತ ಗ್ರಾ.ಪಂ. ಸದಸ್ಯರಿಗೆ ಹೇಳಿದರು.

ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಶುಕ್ರ ವಾರ ಬಿಜೆಪಿ ಮಂಡಲ ವತಿಯಿಂದ ಆಯೋಜಿಸಿದ್ದ ಬಿಜೆಪಿ ಬೆಂಬಲಿತ ಗ್ರಾ.ಪಂ. ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದಾರೆ. ಯಾವುದೇ ಮೀಸಲಾತಿ ಬಂದರೂ ಒಗ್ಗಟ್ಟಿನಿಂದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯಾಗಬೇಕು. ಒಳ್ಳೆಯ ಆಡಳಿತ ನೀಡಬೇಕು ಎಂದು ಹೇಳಿದರು.

ಬಿಜೆಪಿ ಮಾಜಿ ಅಧ್ಯಕ್ಷ ಎಂ.ಪಿ. ನಾಯಕ್, ಬಿಜೆಪಿ ಮುಖಂಡ ಬಾಗಳಿ ಕೊಟ್ರೇಶಪ್ಪ ಮಾತನಾಡಿದರು. ಬಿಜೆಪಿ ಮಂಡಲ ಅಧ್ಯಕ್ಷ ಸತ್ತೂರು ಹಾಲೇಶ್‌ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಆರ್. ಲೋಕೇಶ್, ಡಾ. ಮಲ್ಕಪ್ಪ ಅಧಿಕಾರ, ರಾಘವೇಂದ್ರ ಶೆಟ್ಟಿ, ಲತಾ ನಾಗರಾಜ, ನಿಟ್ಟೂರು ಸಣ್ಣಹಾಲಪ್ಪ, ಬಸವರಾಜ, ಯುವ ಮುಖಂಡ ಶಿರಗಾನಹಳ್ಳಿ ಬಿ. ವಿಶ್ವನಾಥ,  ಯು.ಪಿ. ನಾಗರಾಜ, ಎಂ. ಸಂತೋಷ ಇನ್ನಿತರರಿದ್ದರು.

Leave a Reply

Your email address will not be published.