ಕಾರ್ಮಿಕ ವರ್ಗದ ಹಕ್ಕುಗಳನ್ನು ರಕ್ಷಿಸುವಂತೆ ಆಗ್ರಹ

ಕಾರ್ಮಿಕ ವರ್ಗದ ಹಕ್ಕುಗಳನ್ನು ರಕ್ಷಿಸುವಂತೆ ಆಗ್ರಹ

ನಗರದಲ್ಲಿ  ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ

ದಾವಣಗೆರೆ, ಜ.1- ಸರ್ಕಾರದ ರೈತ ವಿರೋಧಿ ಮತ್ತು ಕಾರ್ಮಿಕ ವಿರೋಧಿ ಕಾಯಿದೆ ಗಳ ವಿರುದ್ಧ ಹೊಸ ವರ್ಷವಾದ ಇಂದು ನಗರದಲ್ಲಿ ಹೋರಾಟದ ಧ್ವನಿ ಕೇಳಿ ಬಂತು.

ಜಯದೇವ ವೃತ್ತದಲ್ಲಿ ಜಮಾಯಿಸಿದ್ದ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿ.ಐ.ಟಿ.ಯು.) ನ ಜಿಲ್ಲಾ ಸಮಿತಿ ಪದಾಧಿಕಾರಿಗಳು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾ, ರೈತ ಮತ್ತು ಕಾರ್ಮಿಕ ತಿದ್ದುಪಡಿ ಕಾಯಿದೆಗಳ ಪ್ರತಿಗಳನ್ನು ಹರಿದು ಹಾಕುವ ಮೂಲಕ ಹೊಸ ವರ್ಷದ ದಿನವನ್ನು ಸ್ವಾಗತಿಸಿದರು. ಅಲ್ಲದೇ ಕಾರ್ಮಿಕ ಹಕ್ಕುಗಳನ್ನು ಉಳಿಸುತ್ತೇವೆ, ರೈತರ ಬದುಕನ್ನು ರಕ್ಷಿಸುತ್ತೇವೆ, ಕಾರ್ಪೊರೇಟ್ ಹಿಡಿತದಿಂದ ದೇಶವನ್ನು ಕಾಪಾಡುತ್ತೇವೆ ಎಂಬ ಪ್ರತಿಜ್ಞೆ ಮಾಡಿದರು.

ಎಲ್ಲಾ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ಧುಗೊಳಿಸಬೇಕು. ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು. ವಿದ್ಯುತ್ ಮಸೂದೆ 2020 ನ್ನು ಹಿಂದಕ್ಕೆ ಪಡೆಯಬೇಕು. ಎಲ್ಲಾ ರೀತಿಯ ಖಾಸಗೀಕರಣ ವನ್ನು ಕೂಡಲೇ ನಿಲ್ಲಿಸಬೇಕು. ಆದಾಯ ತೆರಿ ಗೆಯ ಮಿತಿಯಿಂದ ಹೊರಗಿರುವ ಎಲ್ಲಾ ಕುಟು ಂಬಗಳಿಗೂ ಮಾಸಿಕ 7,500 ರೂ. ನಗದು ವರ್ಗಾವಣೆ ಮಾಡಬೇಕು. ಬಡವರಿಗೆ ಪ್ರತಿಯೊ ಬ್ಬರಿಗೂ ಪ್ರತಿ ತಿಂಗಳು 10 ಕೆ.ಜಿ. ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಬೇಕು. ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಯಲ್ಲಿ ವಾರ್ಷಿಕ 200 ದಿನಗಳ ಕೆಲಸ  ಮತ್ತು ದಿನಕ್ಕೆ 700 ರೂ. ಕೂಲಿ ನೀಡಬೇಕು, ನಗರ ಪ್ರದೇಶಗಳಿಗೂ ಈ ಯೋಜನೆಯನ್ನು ವಿಸ್ತರಿಸ ಬೇಕು. ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತರಬೇಕು. ಎಲ್ಲಾ ಅಸಂಘಟಿತ ಕಾರ್ಮಿ ಕರಿಗೆ ಸಾಮಾಜಿಕ ರಕ್ಷಣಾ ಯೋಜನೆಗಳನ್ನು ವಿಸ್ತರಿಸಬೇಕು. ಉಚಿತ ಸಾರ್ವತ್ರಿಕ ಆರೋಗ್ಯ ರಕ್ಷಣೆಯನ್ನು ಎಲ್ಲರಿಗೂ ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಜಿಲ್ಲಾ ಸಂಚಾಲಕ ಕೆ.ಹೆಚ್. ಆನಂದರಾಜು, ಗ್ರಾಮ ಪಂಚಾಯ್ತಿ ನೌಕರರ ಸಂಘದ ರಾಜ್ಯ ನಾಯಕರಾದ ಉಮೇಶ್ ಕೈದಾಳೆ, ಗುಡಾಳ್ ತಿಪ್ಪೇಸ್ವಾಮಿ ಹಾಗೂ ಕಟ್ಟಡ ಕಾರ್ಮಿಕರ ಸಂಘದ ನಾಯಕರಾದ ಹೊನ್ನೂರು ತಿಮ್ಮಣ್ಣ, ಗುಡ್ಡಪ್ಪ ಎ, ವಸತಿಯುತ ಹಾಸ್ಟೆಲ್ ಗುತ್ತಿಗೆ ನೌಕರರ ಸಂಘದ ನಾಯಕರಾದ ಸುರೇಶ್, ರವಿಕುಮಾರ್, ಬೇತೂರು ಬಸವರಾಜ್  ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published.