ದೂಡಾದಲ್ಲಿ `ಜಿ. ಮಲ್ಲಿಕಾರ್ಜುನಪ್ಪ ಸಭಾಂಗಣ’ ಅನಾವರಣ

ದೂಡಾದಲ್ಲಿ `ಜಿ. ಮಲ್ಲಿಕಾರ್ಜುನಪ್ಪ ಸಭಾಂಗಣ’ ಅನಾವರಣ

ದಾವಣಗೆರೆ,ಜ.11- ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಕಛೇರಿ ಸಭಾಂಗಣಕ್ಕೆ `ಜಿ.ಮಲ್ಲಿಕಾರ್ಜುನಪ್ಪ ಸಭಾಂಗಣ’ ನಾಮಫಲಕವನ್ನು ಜಿಲ್ಲಾ ಉಸ್ತುವಾರಿ ಸಚಿವ  ಭೈರತಿ ಬಸವರಾಜ್ ಅವರು ಇಂದು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಸಚಿವ ಭೈರತಿ ಅವರು ಮಾತನಾಡಿ, ಸರಳ – ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಜಿ. ಮಲ್ಲಿಕಾರ್ಜುನಪ್ಪ ಅವರು ದಾವಣಗೆರೆ ಕ್ಷೇತ್ರದ ಲೋಕಸಭಾ ಸದಸ್ಯರಾಗಿ ಸಲ್ಲಿಸಿದ ಸೇವೆಯನ್ನು ಮೆಲುಕು ಹಾಕಿದರು. ಸಂಸದ ಜಿ.ಎಂ.ಸಿದ್ದೇಶ್ವರ ಅವರ ತಂದೆಯವರಾಗಿದ್ದ ಜಿ.ಮಲ್ಲಿಕಾರ್ಜುನಪ್ಪ ಅವರ  ಸಾಮಾಜಿಕ ಸೇವೆ ಮತ್ತು ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ವಹಿಸಿದ ಪಾತ್ರವನ್ನು ಸಚಿವರು ಸ್ಮರಿಸಿದರು.

ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಲೋಕಸಭಾ ಸದಸ್ಯ ಜಿ.ಎಂ.ಸಿದ್ದೇಶ್ವರ, ಶಾಸಕ ಎಸ್.ಎ.ರವೀಂದ್ರನಾಥ್, ಡಾ. ಬಾಬು ಜಗಜೀವನ್ ರಾಮ್ ಅಭಿವೃದ್ಧಿ ನಿಗಮದ‌ ಅಧ್ಯಕ್ಷರೂ ಆದ ಶಾಸಕ ಪ್ರೊ.ಲಿಂಗಣ್ಣ, ಮಹಾನಗರ ಪಾಲಿಕೆ ಮಹಾಪೌರರಾದ ಬಿ.ಜಿ.ಅಜಯ್ ಕುಮಾರ್, ಉಪ ಮೇಯರ್ ಶ್ರೀಮತಿ ಸೌಮ್ಯ ನರೇಂದ್ರ ಕುಮಾರ್, ದೂಡಾ ಸದಸ್ಯರುಗಳಾದ ನಾಗರಾಜ್ ಎಂ. ರೋಖಡೆ, ಡಿ.ವಿ. ಜಯರುದ್ರಪ್ಪ, ಶ್ರೀಮತಿ ಆರ್.ಎಲ್. ದೇವೀರಮ್ಮ, ಶ್ರೀಮತಿ ಸೌಭಾಗ್ಯ ಮುಕುಂದ, ನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಟಿ. ವೀರೇಶ್, ಸದಸ್ಯರುಗಳಾದ ಎಲ್.ಡಿ ಗೋಣಪ್ಪ, ಸ್ವಾಗಿ ಶಾಂತಕುಮಾರ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್  ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published.