ಸಿದ್ದರಾಮಯ್ಯನವರನ್ನು ಸ್ವಾಗತಿಸಿದ ಶಾಮನೂರು ಮಲ್ಲಿಕಾರ್ಜುನ್

ಸಿದ್ದರಾಮಯ್ಯನವರನ್ನು ಸ್ವಾಗತಿಸಿದ ಶಾಮನೂರು ಮಲ್ಲಿಕಾರ್ಜುನ್

ದಾವಣಗೆರೆ, ಜ.14- ಹರಿಹರದಲ್ಲಿ ಆಯೋಜಿಸಲಾಗಿದ್ದ ಹರ ಜಾತ್ರೆ ಮತ್ತು ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ  ಭಾಗವಹಿಸಲು ಆಗಮಸಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಆಹ್ವಾನಿಸಿದರು.

ಇದೇ ವೇಳೆ ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರನ್ನೂ ಮಲ್ಲಿಕಾರ್ಜುನ್ ಅವರು ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ಅಬ್ದುಲ್ ಜಬ್ಬಾರ್, ಕೆಪಿಸಿಸಿ ವಕ್ತಾರ ಡಿ.ಬಸವರಾಜ್, ದಿನೇಶ್ ಕೆ.ಶೆಟ್ಟಿ,  ಶಾಮನೂರು ಟಿ.ಬಸವರಾಜ್, ಸೈಯದ್ ಸೈಪುಲ್ಲಾ, ಕೆಂಗೋ ಹನುಮಂತಪ್ಪ, ಕೆ.ಎಸ್.ಬಸವಂತಪ್ಪ, ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್, ಸದಸ್ಯ ದೇವರಮನೆ ಶಿವಕುಮಾರ್, ಅಬ್ದುಲ್ ಲತೀಫ್, ಕೆ.ಚಮನ್ ಸಾಬ್, ಜಿ.ಡಿ.ಪ್ರಕಾಶ್, ವಿನಾಯಕ ಪೈಲ್ವಾನ್, ಪಾಲಿಕೆಯ ಕಾಂಗ್ರೆಸ್ ಪಕ್ಷದ ಎಲ್ಲಾ ಸದಸ್ಯರುಗಳು ಅಯೂಬ್ ಪೈಲ್ವಾನ್, ಅನಿತಾ ಬಾಯಿ ಮಾಲತೇಶ್, ಸುಷ್ಮಾ ಪಾಟೀಲ್ ಮತ್ತು ಇತರರು ಹಾಜರಿದ್ದರು.

Leave a Reply

Your email address will not be published.