ಸ್ವರ್ಣ ಜಯಂತಿ ರೋಜಗಾರ್‌ ಯೋಜನೆ ಮುಂದುವರೆಸಲು ಒತ್ತಾಯ

ದಾವಣಗೆರೆ, ಜ.14- ಕಳೆದ 4-5 ತಿಂಗಳಿನಿಂದ ಸ್ಥಗಿತಗೊಂಡಿರುವ ಸ್ವರ್ಣ ಜಯಂತಿ ರೋಜಗಾರ್ ಯೋಜನೆಯನ್ನು ಮುಂದುವರೆ ಸುವಂತೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಮಿತಿ ಒತ್ತಾಯಿಸಿದೆ. ಸುಮಾರು 20 ರಿಂದ 30 ವರ್ಷಗಳಿಂದ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಸ್ವಯಂ ಉದ್ಯೋಗಕ್ಕೆ ಅನುಕೂಲವಾಗುವಂತೆ ಹಾಗೂ ಪ್ರತಿ ವರ್ಷ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಧನ ನೀಡುವುದರ ಮೂಲಕ ಹಿಂದಿನ ಸರ್ಕಾರಗಳು ಈ ಯೋಜನೆ ರೂಪಿಸಿದ್ದವು. ಆದರೆ ಕಳೆದ ನಾಲ್ಕೈದು ತಿಂಗಳಿ ನಿಂದ ಯೋಜನೆ ಕಾರ್ಯರೂಪದಲ್ಲಿ ಇಲ್ಲ ಎಂದು ಸಮಿತಿ ಅಧ್ಯಕ್ಷ ಡಿ.ಜಿ. ಆಸೀಫ್‌ ಹಾಗೂ ಇತರೆ ಪದಾಧಿಕಾರಿಗಳು ತಿಳಿಸಿದ್ದಾರೆ. ಮುಖ್ಯ ಮಂತ್ರಿಗಳು ಈ ಕೂಡಲೇ ಗಮನಹರಿಸಿ ಜಾರಿಗೊಳಿಸುವಂತೆ ಮನವಿ ಮಾಡಿದ್ದಾರೆ.

Leave a Reply

Your email address will not be published.