ಜಗಳೂರು: ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ರೈತರ ಒತ್ತಾಯ

ಜಗಳೂರು: ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ರೈತರ ಒತ್ತಾಯ

ಜಗಳೂರು, ಜ19 – ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ (ನಂಜುಂಡಸ್ವಾಮಿ ಬಣ) ದ ವತಿಯಿಂದ ಪದಾಧಿಕಾರಿಗಳು ತಹಶೀಲ್ದಾರ್ ಡಾ.ನಾಗವೇಣಿ ಅವರಿಗೆ ಲಿಖಿತ ಮನವಿ ಸಲ್ಲಿಸಿದರು. 

ಸತತ ಮೂರು ವರ್ಷಗಳಿಂದ ಬರಕ್ಕೆ ತುತ್ತಾಗಿ ಪ್ರಸಕ್ತವಾಗಿ ಕೋವಿಡ್-19 ರಿಂದ ತಾಲ್ಲೂಕಿನ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. 2021 ಸಾಲಿನಲ್ಲಿ ಮೆಕ್ಕೆಜೋಳ ಬೆಳೆದು ಮಾರಾಟದ ಹಂತದಲ್ಲಿವೆ. ಮಾರುಕಟ್ಟೆಯಲ್ಲಿ ಸೂಕ್ತ ಬೆಲೆಯಿಲ್ಲದೆ ಕೃಷಿ ಚಟುವಟಿಕೆ, ಕಟಾವಿಗೆ  ತಗುಲಿದ ಖರ್ಚು ಸಹ ಭರಿಸಲು ಸಾಧ್ಯವಿಲ್ಲ. ಆದ್ದರಿಂದ ಸರ್ಕಾರ  ಶೀಘ್ರದಲ್ಲಿಯೇ ಎಪಿಎಂಸಿ ಮಾರುಕಟ್ಟೆಯಲ್ಲಿ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆ‌ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು. 

ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳಾದ ಬಸವರಾಜಪ್ಪ, ಬಷೀರ್ ಸಾಬ್, ಗೌಡ್ರ ಚಂದ್ರಪ್ಪ, ಮಹಾಲಿಂಗಪ್ಪ‌, ಲಕ್ಷ್ಮಣನಾಯ್ಕ್, ಬೊಮ್ಮಪ್ಪ, ನಾಗರಾಜ್, ಹನುಮಂತಪ್ಪ, ಹಾಲಸ್ವಾಮಿ ಮತ್ತಿತರರು ಭಾಗವಹಿಸಿದ್ದರು.

Leave a Reply

Your email address will not be published.