ಹರಿಹರ : ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ಹರಿಹರ, ಫೆ.13 – ಕರ್ನಾಟಕ ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಆರ್.ಎಲ್.ಲಕ್ಷ್ಮೀಪತಿ ಅವರು ನಾಡಿದ್ದು ದಿನಾಂಕ 15 ರ ಸೋಮವಾರ ಹರಿಹರದ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಲಿದ್ದು, ಸರ್ಕಾರಿ ಕಚೇರಿಗಳಿಗೆ ಸಂಬಂಧಿಸಿದಂತೆ  ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸುವರು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್.ಕೌಲಾಪೂರೆ ತಿಳಿಸಿದ್ದಾರೆ.