ವಿಮಾ ಸಂಸ್ಥೆಯಿಂದ ತಿರಸ್ಕೃತಗೊಂಡ ಪ್ರಸ್ತಾವನೆಗಳಿಗೆ ಆಕ್ಷೇಪಣೆಗೆ ಅವಕಾ

ದಾವಣಗೆರೆ, ಫೆ.22- ಕಳೆದ 2018 ರ ಮುಂಗಾರು ಹಂಗಾಮಿನ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ವಿಮಾ ಪರಿಹಾರ ಪಡೆಯಲು ಅರ್ಹರಿದ್ದು, ಆದರೆ ವಿಮಾ ಸಂಸ್ಥೆಯಿಂದ ಪ್ರಸ್ತಾವನೆ ತಿರಸ್ಕೃತಗೊಂಡಿದ್ದಲ್ಲಿ, ಅಂತಹ ರೈತರು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ವಿಮಾ ಪರಿಹಾರ ಪಡೆ ಯಲು ಅರ್ಹರಿದ್ದು, ಬೆಳೆ ಸಮೀಕ್ಷೆ ವಿವರಗಳನ್ನು ಬೆಳೆ ವಿಮೆ ವಿವರಗಳೊಂದಿಗೆ ಹೋಲಿಕೆ ಮಾಡಿದ ನಂತರ ತಾಳೆಯಾಗದ ಕೆಲವೊಂದು ಪ್ರಸ್ತಾವನೆಗಳನ್ನು ಸಂಬಂಧಪಟ್ಟ ವಿಮಾ ಕಂಪನಿಯವರು ತಿರಸ್ಕರಿಸಿ, ವಿಮಾ ಮೊತ್ತವನ್ನು ಜಮೆ ಮಾಡಿರುವುದಿಲ್ಲ.  ಈ ರೀತಿಯಾಗಿ ಬೆಳೆ ಸಮೀಕ್ಷೆ ವಿವರಗಳೊಂದಿಗೆ ಹೊಂದಾಣಿಕೆ ಯಾಗದೇ ತಿರಸ್ಕೃತಗೊಂಡ ಪ್ರಸ್ತಾವನೆಗಳ ಬಗ್ಗೆ ರೈತರಲ್ಲಿ ಆಕ್ಷೇಪಣೆಗಳಿದ್ದಲ್ಲಿ ಬರುವ ಮಾರ್ಚ್‌ 4 ರೊಳಗೆ ಲಿಖಿತ ರೂಪದಲ್ಲಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳಲ್ಲಿ/ಗ್ರಾಮ ಪಂಚಾಯತ್‍ಗಳಲ್ಲಿ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳಲ್ಲಿ ಮನವಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ/ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆಯಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Leave a Reply

Your email address will not be published.