ರಸ್ತೆ ಅಪಘಾತದಲ್ಲಿ ಅಪರಿಚಿತನಿಗೆ ಗಾಯ

ದಾವಣಗೆರೆ, ಏ.5- ಅಪಘಾತದಲ್ಲಿ ಗಾಯ ಗೊಂಡ ಗಾಯಾಳು ಅಪರಿಚಿತ ವ್ಯಕ್ತಿಯ ಪತ್ತೆಗೆ ಉತ್ತರ ಸಂಚಾರ ಪೊಲೀಸ್‌ ಠಾಣೆ ಪಿಎಸ್‌ಐ ಮನವಿ ಮಾಡಿದ್ದಾರೆ. ನಿನ್ನೆ ರಾತ್ರಿ ದಾವಣಗೆರೆ ಕಡೆಯಿಂದ ಚಿತ್ರದುರ್ಗಕ್ಕೆ ಹೊರಟಿದ್ದ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದ ಪಾದಚಾರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವ್ಯಕ್ತಿಯ ಹೆಸರು, ವಿಳಾಸ ಗೊತ್ತಿರುವುದಿಲ್ಲ. 25 ವರ್ಷದ, ಕೋಲು ಮುಖ, ತೆಳುವಾದ ಮೈಕಟ್ಟು, ಗೋದಿ ಮೈ ಬಣ್ಣ, ಜೀನ್ಸ್‌ ಪ್ಯಾಂಟ್‌-ಶರ್ಟ್‌ ಧರಿಸಿರುವ ಈತನ ಪತ್ತೆಗೆ ಮನವಿ ಮಾಡಿದ್ದಾರೆ.

Leave a Reply

Your email address will not be published.