ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ

ದಾವಣಗೆರೆ, ಆ.4- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಈ ಸಾಲಿನ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ಯೋಜನೆಯಡಿ ಬಿ.ಇಡಿ ಮತ್ತು ಡಿ.ಇಡಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಕಲಿಕಾ ಮತ್ತು ಬೋಧನಾ ಸಾಮಗ್ರಿಗಳನ್ನು ಖರೀದಿಸಲು ಆರ್ಥಿಕ ಸಹಾಯ ಮಾಡುವ ಹಿತದೃಷ್ಟಿಯಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‌ಸೈಟ್: https://dom.karnataka.gov.in ನಲ್ಲಿ ಪಡೆಯಬಹುದು. ವಿವರಕ್ಕೆ ಸಂಪರ್ಕಿಸುವ ದೂರವಾಣಿ : 08192-250022.