ಹರಿಹರ ತಾ.ನಲ್ಲಿ ಕೊರೊನಾ ನಿಯಂತ್ರಣ

ಹರಿಹರ, ಆ.6- ತಾಲ್ಲೂಕಿನಲ್ಲಿ ಕೊರೊನಾ ರೋಗವು ಸಂಪೂರ್ಣವಾಗಿ ನಿಯಂತ್ರಣದಲ್ಲಿದ್ದು, ಇಂದು ಒಬ್ಬರಿಗೆ ಮಾತ್ರ ಕೊರೊನಾ ರೋಗವು ದೃಢಪಟ್ಟಿದ್ದು, ಒಟ್ಟಾರೆಯಾಗಿ ಇಲ್ಲಿಯವರೆಗೆ 18 ಪ್ರಕರಣ ಗಳು ಇರುವುದಾಗಿ ತಾಲ್ಲೂಕು ವೈದ್ಯಾಧಿಕಾರಿ ಡಾ. ಚಂದ್ರಮೋಹನ್ ತಿಳಿಸಿದರು.

 ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ 4, ಹರಿಹರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ 7, ಖಾಸಗಿ ನರ್ಸಿಂಗ್ ಹೋಂ ನಲ್ಲಿ 2, ಉಳಿದವರು ಮನೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ ಎಂದು ತಿಳಿಸಿದರು. 

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲು ಪ್ರತ್ಯೇಕವಾಗಿ 15 ಬೆಡ್ ವ್ಯವಸ್ಥೆ ಮಾಡಲಾಗಿದೆ. ಮೂರನೇ ಅಲೆ ನಿಯಂತ್ರಣ ವಿಚಾರವಾಗಿ ವೈದ್ಯರಿಗೆ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ತರಬೇತಿ ನೀಡಲಾಗಿದೆ. ನ್ಯುಮೋನಿಯಾ ಬಗ್ಗೆ ಸಹ ನ್ಯುಮೂಕಲ್ ಲಸಿಕೆಯನ್ನು ಹಾಕು ವುದಕ್ಕೆ ತರಬೇತಿಯನ್ನು ಸಹ ನೀಡ ಲಾಗುತ್ತಿದೆ ಎಂದು ಅವರು ವಿವರಿಸಿದರು.