ಅವಳಿ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ದಾವಣಗೆರೆ, ಆ.10- ನಗರದ ಮಾಗನೂರು ಬಸಪ್ಪ ಪ್ರೌಢಶಾಲೆಗೆ ಕಳೆದ ಸಾಲಿನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅವಳಿ ಸಹೋದರರಾದ ಎಂ.ಎಸ್‌ ಸಾಗರ ಹಾಗೂ ಎಂ.ಎಸ್‌. ಸೂರಜ್‌ ಇಬ್ಬರೂ 625 ಅಂಕಗಳಿಗೆ 623 ಅಂಕಗಳನ್ನು ಗಳಿಸುವುದರ ಮೂಲಕ ರಾಜ್ಯಕ್ಕೆ ಮತ್ತು ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.