ಈರುಳ್ಳಿ ಸುರಿದು ಕನಿಷ್ಠ ಬೆಂಬಲ ಬೆಲೆಗೆ ಆಗ್ರಹ

ಈರುಳ್ಳಿ ಸುರಿದು ಕನಿಷ್ಠ ಬೆಂಬಲ ಬೆಲೆಗೆ ಆಗ್ರಹ

ದಾವಣಗೆರೆ, ಸೆ.15- ಈರುಳ್ಳಿ ಸೇರಿದಂತೆ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ ಬಣ) ನೇತೃತ್ವದಲ್ಲಿ ನಗರದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಈರುಳ್ಳಿ ಸುರಿದು ಪ್ರತಿಭಟಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಗಮನ ಸೆಳೆಯಲಾಯಿತು.

ಕನಿಷ್ಠ ಬೆಂಬಲ ಬೆಲೆಯ ಕಾಯ್ದೆ ರೂಪಿಸುವಂತೆ ಸತತ ಹಲವು ವರ್ಷ ಗಳಿಂದ ಒತ್ತಾಯಿಸುತ್ತಿದ್ದರೂ ಕೇಂದ್ರ ಸರ್ಕಾರ ಕಂಡರೂ ಕಾಣದಂತೆ, ಕೇಳಿಸಿದರೂ ಕೇಳಿಸದಂತೆ ನಾಟಕ ಮಾಡುತ್ತಾ, ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಸೇನೆಯ ರಾಜ್ಯಾಧ್ಯಕ್ಷ  ಹುಚ್ಚ ವ್ವನಹಳ್ಳಿ ಮಂಜುನಾಥ ಆಕ್ರೋಶ ವ್ಯಕ್ತಪಡಿಸಿದರು.

ಇವತ್ತಿನ ಬೆಲೆ ಕುಸಿತಕ್ಕೆ ಕೇಂದ್ರ ಸರ್ಕಾರವೇ ಸಂಪೂರ್ಣ ಹೊಣೆ ಯಾಗಲಿದೆ. ಕನಿಷ್ಠ ಬೆಂಬಲ ‌ಬೆಲೆ ಕಾಯ್ದೆ ರೂಪಿಸಿದ್ದರೆ ಇವತ್ತು ರೈತರು ಸಂಕಷ್ಟ ಅನುಭವಿಸುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಆಕ್ಷೇಪಿಸಿದರ ಲ್ಲದೇ, ಕನಿಷ್ಠ ಬೆಂಬಲ ಬೆಲೆ ಕಾಯ್ದೆ ರೂಪಿಸುವಂತೆ ಒತ್ತಾಯಿಸಿದರು.

ಕಳೆದ 4 ವರ್ಷದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈರುಳ್ಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಿಲ್ಲ. ಕಳೆದ 4 ವರ್ಷಗಳ ಹಿಂದೆ ಒಂದು ಕ್ವಿಂಟಾಲ್ ಈರುಳ್ಳಿಗೆ 800 ರೂ. ನಿಗದಿ ಮಾಡಲಾಗಿತ್ತು. ಈಗೇನಾ ದ ರೂ ಬೆಂಬಲ ಬೆಲೆಗೆ ಕಾಯ್ದೆ ರೂಪಿಸಿ ದ್ದರೆ ಕನಿಷ್ಠ ಒಂದು ಕೆಜಿಗೆ 8 ರೂ. ಬೆಲೆ ಇರುತ್ತಿತ್ತು. ಆದರೆ ಈಗ ಮಾರುಕಟ್ಟೆ ಯಲ್ಲಿ ಕೇವಲ 1 ರೂ.ಗೆ ಈರುಳ್ಳಿ ಮಾರಾಟವಾಗುತ್ತಿದ್ದು, ರೈತ ರಿಗೆ ಹಾಕಿದ ಬಂಡವಾಳ ವೂ ಸಿಗದೇ ನಷ್ಟ ಅನುಭವಿ ಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಒಂದು ಕ್ವಿಂಟಾಲ್ ಈರುಳ್ಳಿಗೆ 2 ಸಾವಿರ ಬೆಂಬಲ ಬೆಲೆ ಘೋಷಿಸುವಂತೆ ಉಭಯ ಸರ್ಕಾರಗಳನ್ನು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಆಲೂರು ಪರಶುರಾಮ, ಬೂದಿ ಹಾಳ್ ಭಗತ್ ಸಿಂಹ, ಕಾಡಜ್ಜಿ ಪ್ರಕಾಶ್, ಹೂವಿನಮಡು ನಾಗರಾಜ, ನರಗನಹಳ್ಳಿ ನಾಗರಾಜ, ಹುಚ್ಚವ್ವನಹಳ್ಳಿ ಹನುಮಂತ, ಕೋಲ್ಕುಂಟೆ ಹುಚ್ಚೆಂಗಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.