ಕಾಂಗ್ರೆಸ್ ಬಲವರ್ಧನೆಗೆ ಕಾರ್ಯಕರ್ತರು ಶ್ರಮಿಸಬೇಕು

ಕಾಂಗ್ರೆಸ್ ಬಲವರ್ಧನೆಗೆ ಕಾರ್ಯಕರ್ತರು ಶ್ರಮಿಸಬೇಕು

ಜಗಳೂರು, ಸೆ.15- ತಳಮಟ್ಟದಲ್ಲಿ ಕಾಂಗ್ರೆಸ್ ಬಲವರ್ಧನೆಗೆ ಕಾರ್ಯಕರ್ತರು ಶ್ರಮಿಸಬೇಕು ಎಂದು ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಕರೆ ನೀಡಿದರು.

ತಾಲ್ಲೂಕಿನ ಕ್ಯಾಸೇನಹಳ್ಳಿ ಗ್ರಾಮದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಂದು ಏರ್ಪಾ ಡಾಗಿದ್ದ ಗ್ರಾಮ ಪಂಚಾಯತ್ ಪ್ರಾಜೆಕ್ಟ್ ಪ್ರತಿನಿಧಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಳಮಟ್ಟದಲ್ಲಿ ಪಕ್ಷವನ್ನು ಸಜ್ಜುಗೊಳಿಸುವ ಮೂಲಕ ಕಾಂಗ್ರೆಸ್ಸನ್ನು ಕೇಡರ್ ಬೇಸ್ ಪಕ್ಷವನ್ನಾಗಿ ಮಾಡಲು ಗ್ರಾಮ ಪಂಚಾಯತಿ ಮಟ್ಟದಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಿ, ಅಧ್ಯಕ್ಷರಿಗೆ ಪಕ್ಷದ ಜವಾಬ್ದಾರಿ ನೀಡಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ 5 ವರ್ಷಗಳ ಕಾಲ ಸುಭದ್ರ ಆಡಳಿತ ನೀಡಿದ ಮಾಜಿ ಮುಖ್ಯ ಮಂತ್ರಿ ಸಿದ್ದ ರಾಮಯ್ಯ ಅವರ ನೇತೃತ್ವದಲ್ಲಿ 175 ಭರವಸೆ ಗಳನ್ನು ಈಡೇರಿಸುವ ಮೂಲಕ ಸರ್ವ ಜನಾಂಗದ ಅಭಿವೃದ್ಧಿ ಮಾಡಲಾಯಿತು. ಜಗಳೂರು ಕ್ಷೇತ್ರಕ್ಕೆ 3300 ಕೋಟಿ ಅನುದಾನ ತಂದು ಹಳ್ಳಿಗಳ ಅಭಿವೃದ್ಧಿ ಮಾಡಲಾಯಿತು. ಆದರೆ, ನಮ್ಮ ಸಾಧನೆಗಳನ್ನು ಜನತೆಗೆ ಮುಟ್ಟಿಸಲಾಗ ಲಿಲ್ಲ. ಅದರ ಪರಿ ಣಾಮ ಸೋಲಬೇಕಾಯಿತು ಎಂದು ರಾಜೇಶ್ ಹೇಳಿದರು.

ಕೆರೆ ಊಳೆತ್ತುವ ನೆಪದಲ್ಲಿ ಅಭಿವೃದ್ಧಿ ಮಾಡದೇ ಅನುದಾನ ದುರುಪಯೋಗ ವಾಗಿದೆ. 3 ವರ್ಷಗಳು ಕಳೆದರೂ ಕ್ಷೇತ್ರದಲ್ಲಿ ಒಂದೇ ವಸತಿ ಯೋಜನೆ ನೀಡಲಾಗಿಲ್ಲ. ಭೂ ಮಿ ಹಕ್ಕುಪತ್ರ ನೀಡಲಾಗಿಲ್ಲ ಎಂದು ಬಿಜೆಪಿ ವಿರುದ್ಧ ಮಾಜಿ ಶಾಸಕರು ಹರಿಹಾಯ್ದರು.

ಬ್ಲಾಕ್ ಉಸ್ತುವಾರಿ ನಟರಾಜ್ ಮಾತನಾಡಿ, ಬಿಜೆಪಿಯವರು 70 ವರ್ಷ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನೆ ಮಾಡುತ್ತಾರೆ. ಅಂತವರಿಗೆ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಕಾಂಗ್ರೆಸ್.ಉತ್ತಮ ಆಡಳಿತ ಹಾಗೂ ಪ್ರಜಾಪ್ರಭುತ್ವದ ಬುನಾದಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಮುಖಾಂತರ ಸಂವಿಧಾನ ನೀಡಿದ್ದು ಕಾಂಗ್ರೆಸ್ ಪಕ್ಷ ಎಂದರು.

ಕೇವಲ ಏಳು ವರ್ಷ ಅಧಿಕಾರ ನಡೆಸಿದ ಮೋದಿ‌ ನೇತೃತ್ವದ ಬಿಜೆಪಿ‌ ಸರ್ಕಾರ ಅಗತ್ಯ ವಸ್ತುಗಳಾದ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಖಾದ್ಯ ತೈಲ, ದ್ವಿದಳ ಧಾನ್ಯಗಳ ಬೆಲೆ ಏರಿಸಿ ಜನರಿಂದ ತೆರಿಗೆ ರೂಪದಲ್ಲಿ ಹಗಲು ದರೋಡೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಕೆಪಿಸಿಸಿ ಎಸ್ಟಿ ವಿಭಾಗ ರಾಜ್ಯಾಧ್ಯಕ್ಷ ಕೆ.ಪಿ. ಪಾಲಯ್ಯ ಮಾತನಾಡಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೇಡರ್ ಬೇಸ್ ಮೂಲಕ ವ್ಯಕ್ತಿ ಪೂಜೆ ಮಾಡದೇ ಪಕ್ಷ ಮುಖ್ಯ ಎಂದು ಭಾವಿಸಿ ಗ್ರಾಮೀಣ ಮಟ್ಟದಲ್ಲಿ ಪಕ್ಷವನ್ನು ಬಲಗೊಳಿಸಿ ಮುಂಬರುವ ಜಿಲ್ಲಾ ಪಂಚಾ ಯತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಇದೇ ವೇಳೆ ಕ್ಯಾಸೇನಹಳ್ಳಿ ಗ್ರಾಮ ಪಂಚಾಯತಿ ಮಟ್ಟದ ಕಾಂಗ್ರೆಸ್ ಸಮಿತಿ ರಚಿಸಿ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಗ್ರಾಮ ಮಟ್ಟದ  ಅಧ್ಯಕ್ಷರಾಗಿ ಗೌರಿಪುರ ನಂಜುಡಸ್ವಾಮಿ ಅವರನ್ನು ನೇಮಕ ಮಾಡಲಾಯಿತು.

ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಷಂಷೀರ್ ಅಹಮದ್, ಅರಸೀಕೆರೆ ಬ್ಲಾಕ್ ಅಧ್ಯಕ್ಷ ಕಮ್ಮತ್ತಹಳ್ಳಿ ಮಂಜಣ್ಣ, ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಕಲ್ಲೇಶ್ ರಾಜ್ ಪಟೇಲ್, ಪ್ರಧಾನ ಕಾರ್ಯದರ್ಶಿ ಪಲ್ಲಾಗಟ್ಟೆ ಶೇಖರಪ್ಪ, ಜಿ.ಪಂ. ಮಾಜಿ ಸದಸ್ಯ ಎಸ್.ಕೆ.ರಾಮರೆಡ್ಡಿ, ಮಾಜಿ ಅಧ್ಯಕ್ಷ ತಿಪ್ಪೇಸ್ವಾಮಿ ಗೌಡ್ರು, ತಾ.ಪಂ ಮಾಜಿ ಅಧ್ಯಕ್ಷ ಶಿವಕುಮಾರ್, ಮಾಜಿ ಸದಸ್ಯ ರಾಮಚಂದ್ರಪ್ಪ, ಮತ್ತಿತರರು ಉಪಸ್ಥಿತರಿದ್ದರು.