ದಾವಣಗೆರೆ ಸೀತಮ್ಮ ಬಾಲಕಿಯರ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕರಾದ ಬೆಂಗಳೂರಿನ ನಿವಾಸಿ ಶ್ರೀ ಬಿ.ಎಂ. ಹಂಪಾಳಿ (82) ಅವರು ದಿನಾಂಕ 14.11.2021ರ ಭಾನುವಾರ ರಾತ್ರಿ 10 ಗಂಟೆಗೆ ನಿಧನರಾದರು. ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 15.11.2021ರ ಸೋಮವಾರ ಮಧ್ಯಾಹ್ನ 1 ಗಂಟೆಗೆ ಗ್ಲಾಸ್ ಹೌಸ್ ಬಳಿಯ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಅವರ ಕುಟುಂಬ ವರ್ಗದವರು ತಿಳಿಸಿದ್ದಾರೆ.