ವೀರಶೈವ ಮಹಾಸಭಾದಿಂದ ಸಂಗನಬಸವ ಶ್ರೀಗಳಿಗೆ ಶ್ರದ್ಧಾಂಜಲಿ

ವೀರಶೈವ ಮಹಾಸಭಾದಿಂದ  ಸಂಗನಬಸವ ಶ್ರೀಗಳಿಗೆ ಶ್ರದ್ಧಾಂಜಲಿ

ದಾವಣಗೆರೆ, ನ.22- ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾದ ದಾವಣಗೆರೆ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಲಿಂಗೈಕ್ಯರಾದ ಹಾಲಕೆರೆ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಡಾ. ಶ್ರೀ ಜಗದ್ಗುರು ಸಂಗನಬಸವ ಮಹಾಸ್ವಾಮಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು

ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷರೂ ಆಗಿರುವ ದೂಡಾ ಅಧ್ಯಕ್ಷ ದೇವರಮನಿ ಶಿವಕುಮಾರ್  ಮಾತನಾಡಿ, ರಾಜ್ಯದಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಸಮಾಜಕ್ಕೆ ಅಧ್ಯಾತ್ಮ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಅವಿರತ ಸೇವೆ ಸಲ್ಲಿಸಿದ ಸ್ವಾಮೀಜಿಯವರು ನಮ್ಮನ್ನು ಅಗಲಿದ್ದಾರೆ. 

ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕರೆಶಿವಪ್ಳರ ಸಿದ್ದೇಶ್, ಟಿಂಕರ್ ಮಂಜಣ್ಣ, ಹಿರಿಯ ಪತ್ರಕರ್ತ ಬಕ್ಕೇಶ್ ನಾಗನೂರು,  ಪಾಲಿಕೆ ಮಾಜಿ ಸದಸ್ಯ ಶಿವನಗೌಡ ಟಿ.ಪಾಟೀಲ್, ಅಣಜಿ ಪ್ರಶಾಂತ್, ಜಯಪ್ರಕಾಶ್ ಮಾಗಿ, ಅಭಿಷೇಕ ಗಾಂಜಿ, ಕೊರಟಿಕೆರೆ ಶಿವಕುಮಾರ್, ಶ್ರೀಕಂಠಯ್ಯ, ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಮಂಗಳಾ ಕರಿಬಸಪ್ಪ, ಕೆ.ಬಿ. ಸುಮಂಗಲಾ, ಎಚ್.ಆರ್. ಲಕ್ಷ್ಮಿ, ಎಸ್.ಕೆ. ಶೋಭಾ ಮತ್ತಿತರರು ಉಪಸ್ಥಿತರಿದ್ದರು.