ಹರಪನಹಳ್ಳಿ : ಶಿಕ್ಷಣ, ಎಲ್ಲಾ ಪ್ರಗತಿಗೆ ಭದ್ರಬುನಾದಿಯಾಗಿದ್ದು ಪ್ರತಿಯೊಬ್ಬರೂ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ನೀಲಗುಂದ ಕ್ಷೇತ್ರದ ಜಿಲ್ಲಾ ಪಂಚಾಯ್ತಿ ಸದಸ್ಯ ಹೆಚ್.ಬಿ.ಪರಶುರಾಮಪ್ಪ ಹೇಳಿದರು.
ಹೊನ್ನಾಳಿ

ಹೊನ್ನಾಳಿ ತಾ. ವ್ಯಾಪ್ತಿಗೆ ವಿಸ್ತರಿಸಿದ ಹಿರಿಯ ನಾಗರಿಕರ ಸಂಘ
ಹೊನ್ನಾಳಿ ಪಟ್ಟಣಕ್ಕೆ ಸೀಮಿತ ವಾಗೊಂಡಿದ್ದ ಹಿರಿಯ ನಾಗರಿಕರ ಸಹಕಾರ ಸಂಘವನ್ನು ಇದೀಗ ತಾಲ್ಲೂಕು ವ್ಯಾಪ್ತಿಗೆ ವಿಸ್ತರಿ ಸುವ ಆಸಕ್ತಿ ಹೊಂದಿದೆ ಎಂದು ಸೊಸೈಟಿಯ ಅಧ್ಯಕ್ಷ ಬೆನಕನಹಳ್ಳಿ ಪಿ. ವೀರಪ್ಪ ಹೇಳಿದರು.

ಹೊನ್ನಾಳಿ ಅರ್ಬನ್ ಕ್ರೆಡಿಟ್ ಸೊಸೈಟಿಯಿಂದ ಶೇ.12 ಡಿವಿಡೆಂಡ್
ಹೊನ್ನಾಳಿ ಅರ್ಬನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು 50 ಲಕ್ಷ ರೂ.ಗಳ ನಿವ್ವಳ ಲಾಭ ಹೊಂದಿದೆ. 12ರಷ್ಟು ಡಿವಿಡೆಂಡನ್ನು ಸದಸ್ಯರಿಗೆ ನೀಡಲು ತೀರ್ಮಾನಿಸಲಾಗಿದೆ ಎಂದು ಸೊಸೈಟಿಯ ಅಧ್ಯಕ್ಷ ಡಾ. ರಾಜಕುಮಾರ್ ಹೇಳಿದರು.

ಹೊನ್ನಾಳಿಯ ಶಿವ ಕೋ-ಆಪರೇಟಿವ್ ಸೊಸೈಟಿ ಸದಸ್ಯರಿಗೆ ಶೇ.10 ಲಾಭಾಂಶ ಹಂಚಿಕೆ
ಹೊನ್ನಾಳಿ ಶಿವ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು ತಾಲ್ಲೂಕಿನ ಸುರಹೊನ್ನೆಯಲ್ಲಿ 42 ಲಕ್ಷ ರೂ. ವೆಚ್ಚದ ಶಾಖಾ ಕಟ್ಟಡ ಹೊಂದಿದ್ದು, ಸುಮಾರು 14 ಲಕ್ಷ ರೂ. ವೆಚ್ಚದಲ್ಲಿ ಸಾಸ್ವೆಹಳ್ಳಿ ಶಾಖೆಗೆ ನಿವೇಶನ ಖರೀದಿಸಲಾಗಿದೆ. 5,245 ಸದಸ್ಯರೊಂದಿಗೆ 37 ಕೋಟಿ ರೂ. ದುಡಿಯುವ ಬಂಡವಾಳ ಹೊಂದಿದೆ

ರಾಮ ಮಂದಿರ : ನಿಧಿ ಸಮರ್ಪಣಾ ಅಭಿಯಾನದ ಕಾರ್ಯಾಲಯ ಉದ್ಘಾಟನೆ
ಹೊನ್ನಾಳಿ : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡುವುದು ಪ್ರತಿಯೊಬ್ಬ ಹಿಂದುವಿನ ಕನಸಾಗಿದ್ದು, ಇದೀಗ ಅದು ನನಸಾಗುತ್ತಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಕಾಂಗ್ರೆಸ್ನಿಂದ ಪ್ರತಿ ತಾಲ್ಲೂಕಿಗೆ 2 ಲಕ್ಷ ರೂ. ವೆಚ್ಚದಲ್ಲಿ ವಾರಿಯರ್ಸ್ಗಳಿಗೆ ಆರೋಗ್ಯ ಕಿಟ್
ಹೊನ್ನಾಳಿ : ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರತಿ ತಾಲ್ಲೂಕಿಗೆ 2 ಲಕ್ಷ ರೂ.ಗಳ ವೆಚ್ಚದಲ್ಲಿ ಆರೋಗ್ಯ ಕಿಟ್ ವಿತರಿಸುತ್ತಿದ್ದರೆ, ಬಿಜೆಪಿ ಕೊರೊನಾ ಹೆಸರಿನ ಮೂಲಕ ವಿವಿಧ ಹಂತಗಳಲ್ಲಿ ಭ್ರಷ್ಟಾಚಾರ ನಡೆಸುತ್ತಿದೆ ಎಂದು ಮಾಜಿ ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.

ಸೂರಗೊಂಡನಕೊಪ್ಪಕ್ಕೆ ತಾಂಡಾ ಅಭಿವೃದ್ದಿ ನಿಗಮದ ಅಧ್ಯಕ್ಷರ ಭೇಟಿ, ಪರಿಶೀಲನೆ
ಹೊನ್ನಾಳಿ : ನ್ಯಾಮತಿ ತಾಲ್ಲೂಕು ಸೂರಗೊಂಡನಕೊಪ್ಪ ಗ್ರಾಮಕ್ಕೆ ತಾಂಡಾ ಅಭಿವೃದ್ದಿ ನಿಗಮದ ಅಧ್ಯಕ್ಷ ಪಿ. ರಾಜೀವ್ ಅವರು ನಿನ್ನೆ ಭೇಟಿ ನೀಡಿ, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಿದರು.

ಸಮಾಜದ ಅಭಿವೃದ್ಧಿಗೆ ಶಿಕ್ಷಣವೇ ಮೂಲಮಂತ್ರ
ಹೊನ್ನಾಳಿ : ಸಮಾಜದ ಅಭಿವೃದ್ಧಿಗೆ ಶಿಕ್ಷಣವೇ ಮೂಲಮಂತ್ರ. ಹಾಗಾಗಿ ಎಲ್ಲರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ನೊಳಂಬ ವೀರಶೈವ-ಲಿಂಗಾಯತ ಯುವ ವೇದಿಕೆಯ ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕು ಘಟಕದ ಅಧ್ಯಕ್ಷ ಜೀನಹಳ್ಳಿ ಎಂ.ಬಿ. ಚನ್ನೇಶ್ ಹೇಳಿದರು.

ವಿದ್ಯಾರ್ಥಿಗಳಿಗೆ ಚನ್ನಮ್ಮನ ಧೈರ್ಯವು ಪ್ರೇರಣೆಯಾಗಲಿ
ಹೊನ್ನಾಳಿ : ಕಿತ್ತೂರು ರಾಣಿ ಚೆನ್ನಮ್ಮನ ಧೈರ್ಯ ಸಾಹಸ ಮನೋಭಾವವು ಇಂದಿನ ವಿದ್ಯಾರ್ಥಿಗಳ ಸಾಧನೆಗೆ ಪ್ರೇರಣೆಯಾಗಲಿ ಎಂಬುದಾಗಿ ರಾಜ್ಯ ಪಂಚಮಸಾಲಿ ಸಮಾಜದ ಯುವ ಘಟಕದ ಮಾಜಿ ಅಧ್ಯಕ್ಷ ಪಟ್ಟಣಶೆಟ್ಟಿ ಪರಮೇಶ್ ಹೇಳಿದರು.

ಐಸಿಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದಿಂದ ಗ್ರಾಮೀಣ ಮಹಿಳೆಯರ ಕೃಷಿ ಅನುಭವ ಹಂಚಿಕೆ
ನ್ಯಾಮತಿ : ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ರೈತ ಮಹಿಳಾ ದಿನಾಚರಣೆ ಆಚರಿಸಲಾಯಿತು. ಗ್ರಾಮೀಣ ಭಾಗದಲ್ಲಿ ಕೃಷಿ ಮತ್ತು ಕೃಷಿಯೇತರ ಚಟುವಟಿಕೆಗಳಲ್ಲಿ ಯಶಸ್ಸು ಗಳಿಸಿರುವ 8 ಗ್ರಾಮೀಣ ಮಹಿಳೆಯರು ತಮ್ಮ ಕೃಷಿ ಅನುಭವಗಳನ್ನು ಹಂಚಿಕೊಂಡರು.

ಸಾಗರದಷ್ಟು ವಿಶಾಲವಾಗಿರುವ ಕ್ರೀಡಾ ಕ್ಷೇತ್ರವನ್ನು ಸೀಮಿತಗೊಳಿಸದಂತೆ ನಿರ್ವಹಿಸಬೇಕು
ಪಟ್ಟಣದ ಹಿರೇಕಲ್ಮಠದಲ್ಲಿ ನೂತನ ಕರ್ನಾಟಕ ರಾಜ್ಯ ಹ್ಯಾಂಡ್ಬಾಲ್ ಅಸೋಸಿಯೇಷನ್ ಪದಾಧಿಕಾರಿಗಳನ್ನು ಪೀಠಾಧ್ಯಕ್ಷ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸನ್ಮಾನಿಸಿದರು.

ಒಂದೇ ರೈತ ಸಂಘ ರಚನೆಗೆ ತೀರ್ಮಾನ : ಕುಂದೂರು ಹನುಮಂತಪ್ಪ
ಹೊನ್ನಾಳಿ : ಹಿರೇಕಲ್ಮಠದ ಶ್ರೀ ಚನ್ನಮಲ್ಲಿಕಾರ್ಜುನ ಸ್ವಾಮಿಗಳ ಮಾರ್ಗದರ್ಶನದಂತೆ ತಾಲ್ಲೂಕಿನ ಅನೇಕ ರೈತ ಬಣಗಳ ರೈತ ಮುಖಂಡರುಗಳು ಹಾಗೂ ಪದಾಧಿಕಾರಿಗಳು ಸೇರಿ ಒಂದೇ ರೈತ ಸಂಘ ರಚನೆಗೆ ಮುಂದಾಗಿರುವುದಾಗಿ ಕುಂದೂರು ಹನುಮಂತಪ್ಪ ಹೇಳಿದರು.