ಸಿಎಂ ಪರಿಹಾರ ನಿಧಿಗೆ ದೂಡಾದಿಂದ 25 ಲಕ್ಷ ರೂ. ದೇಣಿಗೆ

ಸಿಎಂ ಪರಿಹಾರ ನಿಧಿಗೆ ದೂಡಾದಿಂದ 25 ಲಕ್ಷ ರೂ. ದೇಣಿಗೆ

ದಾವಣಗೆರೆ, ಏ.22- ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಕೋವಿಡ್-19 ನಿಯಂತ್ರಣಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿಗಳ ಚೆಕ್‌ ನೀಡಲಾಯಿತು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ಕೋವಿಡ್-19 ಕುರಿತಾದ ಪ್ರಗತಿ ಪರಿಶೀಲನಾ ಸಭೆಯ ನಂತರ ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ದೂಡಾ ಆಯುಕ್ತ ಬಿ.ಟಿ. ಕುಮಾರಸ್ವಾಮಿ ಚೆಕ್‌ ನೀಡಿದರು. ಸಂಸದ ಜಿ.ಎಂ. ಸಿದ್ದೇಶ್ವರ್, ಶಾಸಕ ಎಸ್.ಎ. ರವೀಂದ್ರನಾಥ್, ಎಸ್.ವಿ. ರಾಮಚಂದ್ರ, ವಿಧಾನ ಪರಿಷತ್ ಸದಸ್ಯರುಗಳಾದ ಅಬ್ದುಲ್ ಜಬ್ಬಾರ್, ನಾರಾಯಣ ಸ್ವಾಮಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಎಸ್.ಪಿ. ಹನುಮಂತರಾಯ, ಸಿಇಓ ಪದ್ಮಾ ಬಸವಂತಪ್ಪ ಹಾಗೂ ಇನ್ನಿತರೆ ಅಧಿಕಾರಿಗಳು ಹಾಜರಿದ್ದರು.