ದೀನದಯಾಳ್ ಅಂತ್ಯೋದಯ ಯೋಜನೆಯಡಿ ಅರ್ಜಿ

ಮಲೇಬೆನ್ನೂರು, ಜೂ. 6- ದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಯೋಜನೆಯಡಿ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ಸ್ವಯಂ ಉದ್ಯೋಗ ಕೈಗೊಳ್ಳಲು 3 ಜನ ಹಾಗೂ ಸಾಮಾಜಿಕ ಕ್ರೋಢೀಕರಣ ಮತ್ತು ಸಾಂಸ್ಥಿಕ ಅಭಿವೃದ್ಧಿ ಘಟಕದಡಿ 1 ಮಹಿಳಾ ಸ್ವ-ಸಹಾಯ ಸಂಘಗಳನ್ನು ರಚಿಸಲು, ಎಸ್‌.ಹೆಚ್.ಜಿ. ಬ್ಯಾಂಕ್ ಕ್ರೆಡಿಟ್ ಲಿಂಕೇಜ್ ಯೋಜನೆಯಡಿ-2 ಸ್ವ-ಸಹಾಯ ಸಂಘಗಳಿಗೆ ಬ್ಯಾಂಕಿನಿಂದ ಸಾಲ ಪಡೆಯಲು ಮತ್ತು ಕೌಶಲ್ಯಾಭಿವೃದ್ಧಿ ಮೂಲಕ ಉದ್ಯೋಗ ಮತ್ತು ಸ್ಥಳ ನಿಯುಕ್ತಿ ಕಾರ್ಯಕ್ರಮದಡಿ 20 ಜನಕ್ಕೆ ವಿವಿಧ ತರಬೇತಿಗಳನ್ನು ನೀಡಲಾಗುವುದು.

ಆಸಕ್ತರಿಂದ ಹಾಗೂ ಗುಂಪುಗಳಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿಯನ್ನು ದ್ವಿಪ್ರತಿಯಲ್ಲಿ ಇದೇ ದಿನಾಂಕ 30ರ ಒಳಗೆ ಕಚೇರಿಗೆ ಸಲ್ಲಿಸಬೇಕು ಎಂದು ಮಲೇಬೆನ್ನೂರು ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ.