ಹಳ್ಳಿಯ ಅಭಿವೃದ್ಧಿ ನೋಡಿ ಮತ ನೀಡಿ – ಶಾಸಕ ಎಸ್.ಭೀಮನಾಯ್ಕ

ಹಳ್ಳಿಯ ಅಭಿವೃದ್ಧಿ ನೋಡಿ ಮತ ನೀಡಿ – ಶಾಸಕ ಎಸ್.ಭೀಮನಾಯ್ಕ

ಕೊಟ್ಟೂರು, ಡಿ.23- ನಾನು ಶಾಸಕನಾದ ಮೇಲೆ ಪ್ರತಿ ಹಳ್ಳಿಗಳಲ್ಲಿ ಮಾಡಿರುವ ಅಭಿವೃದ್ಧಿಯನ್ನು ನೋಡಿ ಗ್ರಾಮ ಪಂಚಾಯತಿಯ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ಶಾಸಕ ಎಸ್.ಭೀಮನಾಯ್ಕ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು.

ಕೊಟ್ಟೂರು ತಾಲ್ಲೂಕಿನ ಗಜಾಪುರ, ಕಂದಗಲ್ಲು, ತಿಮ್ಮಲಾಪುರ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಿ ಮಾತನಾಡಿದ ಅವರು, ಕಳೆದ ಎರಡು ದಶಕಗಳಿಂದ ಆಗದ ಎಷ್ಟೋ ಕಾಮಗಾರಿಗಳು ನನ್ನ ಅವಧಿಯಲ್ಲಿ ಚುರುಕುಗೊಂಡಿವೆ ಎಂದು ಹೇಳಿದರು.

ಅಭಿವೃದ್ಧಿ ಸಹಿಸದ ಬಿಜೆಪಿಯವರು ವಿನಾಕಾರಣ ಆರೋಪ ಮಾಡು ತ್ತಿದ್ದಾರೆ.  ಅಷ್ಟಕ್ಕೂ ಯಾವ ಮಾನದಂಡದ ಮೇಲೆ ಮತ ಕೇಳುತ್ತಾರೆ ಗೊತ್ತಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರವಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಡವರಿಗಾಗಿ ಹಾಗೂ ನಮ್ಮ ಕಾರ್ಯಕರ್ತರಿಗೆ ನಾವು ಮಾಡಿರುವ ಅಭಿವೃದ್ಧಿ ಕಾಮಗಾರಿಯನ್ನು ಮಾನದಂಡವಾಗಿ ಇಟ್ಟುಕೊಂಡು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಲು ಮತದಾರರಲ್ಲಿ ಮನವಿ ಮಾಡಿಕೊಂಡರು.