ನಟರಾಜ್ ಸರ್ಕಾರಿ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷ

ದಾವಣಗೆರೆ,ಜ.25- ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷರಾಗಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಎನ್.ಇ. ನಟರಾಜ್ ಅವರು ಆಯ್ಕೆಯಾಗಿದ್ದಾರೆ.

ಹರಿಹರ ತಾಲ್ಲೂಕಿನ ಕೊಂಡಜ್ಜಿಯಲ್ಲಿ ನಿನ್ನೆ ಏರ್ಪಾಡಾಗಿದ್ದ 2 ದಿನಗಳ ಒಕ್ಕೂಟದ ರಾಜ್ಯ ಮಟ್ಟದ ಸಮ್ಮೇಳನದ ಸಂದರ್ಭದಲ್ಲಿ ನಡೆದ ಒಕ್ಕೂಟಕದ ಸಭೆಯಲ್ಲಿ ಈ ಆಯ್ಕೆ ಅವಿರೋಧವಾಗಿ ನಡೆಯಿತು.

ಒಕ್ಕೂಟದ ಗೌರವ ಅಧ್ಯಕ್ಷರಾಗಿ ಮಹಾದೇವಯ್ಯ ಮಠಪತಿ, ಕಾರ್ಯಾಧ್ಯಕ್ಷರಾಗಿ ಕು. ಶೋಭಾ ಲೋಕ್ ನಾಗ್, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಜೈಕುಮಾರ್ ಅವರುಗಳು ಆಯ್ಕೆಯಾಗಿದ್ದಾರೆ.

ಸಭೆಯಲ್ಲಿ ಉಪಸ್ಥಿತರಿದ್ದ ವಿಧಾನಸೌಧ ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ಪಿ. ಗುರುಸ್ವಾಮಿ ಮತ್ತಿತರರು ನಟರಾಜ್ ನೇತೃತ್ವದ ಎಲ್ಲಾ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದ್ದಾರೆ.