ಕಾಂಗ್ರೆಸ್ ಅಧಿಕಾರಕ್ಕೆ ತರಲು ಸಂಘಟನೆ

ಕಾಂಗ್ರೆಸ್ ಅಧಿಕಾರಕ್ಕೆ ತರಲು ಸಂಘಟನೆ

ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಕ್ಷಾ ರಾಮಯ್ಯ ಕರೆ

ದಾವಣಗೆರೆ, ಮಾ. 21- ಇತ್ತೀಚೆಗೆ ರಾಜ್ಯ ಕಾಂಗ್ರೆಸ್ ಪಕ್ಷದ ಯುವ ಘಟಕದ ಚುನಾವಣೆಯಲ್ಲಿ ವಿಜೇತರಾದ ರಕ್ಷಾ ರಾಮಯ್ಯ ಅವರ ತಂಡ ದಾವಣಗೆರೆಗೆ ಆಗಮಿಸಿ, ದಾವಣಗೆರೆ ಜಿಲ್ಲಾ ಯುವ ಘಟಕದ ಪದಾಧಿಕಾರಿಗಳನ್ನು ಸನ್ಮಾನಿಸುವುದರ ಜೊತೆಗೆ ಕಾಂಗ್ರೆಸ್ ಪಕ್ಷದ ಹಿರಿಯರೊಂದಿಗೆ ಸಮಾಲೋಚನೆ ನಡೆಸಿತು. 

ಕರ್ನಾಟಕ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಕ್ಷಾ ರಾಮಯ್ಯ, ಉಪಾಧ್ಯಕ್ಷೆ ಕೆ.ಆರ್. ಭವ್ಯ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ  ಅಖಿಲ್ ಅಹ್ಮದ್, ಪಿ.ವಿಶ್ವನಾಥ, ಕೆ. ಆರಿಫುಲ್ಲಾ. ಹೆಚ್.ಆರ್. ದೀಪಿಕಾ ರೆಡ್ಡಿ, ವಿ. ಚೈತ್ರಾ, ಪಿ.ಟಿ. ಭರತ್ ನಾಯ್ಕ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಮಾತಾಡಿದ ರಾಜ್ಯಾಧ್ಯಕ್ಷ ರಕ್ಷಾ ರಾಮಯ್ಯ ರಾಜ್ಯ ಮತ್ತು ಕೇಂದ್ರದಲ್ಲಿ  ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪಕ್ಷ ಸಂಘಟನೆ ಮಾಡಬೇಕು ಹಾಗೂ ಪಕ್ಷದ ಸಂಘಟನೆ ಜೊತೆಗೆ ಸಾಮಾಜಿಕ ಕಾರ್ಯ ಮಾಡಿ ಈಗಿನ ಯುವಕರು ಸಮಾಜಕ್ಕೆ ಮಾದರಿಯಾಗಬೇಕು ಎಂದು ತಿಳಿಸಿದರು.

ಅವರು ಇದೇ ವೇಳೆ ಶಾಸಕ  ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರನ್ನು ಭೇಟಿ ಮಾಡಿ  ಕಾಂಗ್ರೆಸ್ ಪಕ್ಷದ ಸಂಘಟನೆ ಬಗ್ಗೆ ಚರ್ಚಿಸಿದರು.

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಕೆ. ಶೆಟ್ಟಿ, ಮುದೇಗೌಡ್ರ ಗಿರೀಶ್, ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಅನಿತಾಬಾಯಿ ಮಾಲತೇಶ್, ಶ್ರೀಮತಿ ಆಶಾರಾಣಿ ಮುರುಳಿ, ಶ್ರೀಮತಿ ಮಂಗಳಮ್ಮ, ಶ್ರೀಮತಿ ಸುಷ್ಮಾ ಪಾಟೀಲ್, ಶ್ರೀಮತಿ ರುದ್ರಮ್ಮ, ಮಾಜಿ ರಾಷ್ಟ್ರೀಯ ಯುವ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಉಲ್ಲಾ, ಮಾಜಿ ಜಿಲ್ಲಾಧ್ಯಕ್ಷ ಸೈಯ್ಯದ್ ಖಾಲಿದ್, ಜಿಲ್ಲಾ ಅಧ್ಯಕ್ಷ ನಿಖಿಲ್ ಕೊಂಡಜ್ಜಿ, ಎನ್‍ಎಸ್‍ಯುಐ ಜಿಲ್ಲಾಧ್ಯಕ್ಷ ಅಲಿ ರಹಮತ್ ಪೈಲ್ವಾನ್,  ಪ್ರಧಾನ ಕಾರ್ಯದರ್ಶಿಗಳಾದ ರಂಜಿತ್ ಎಚ್ ಎಸ್, ಮೊಹಮ್ಮದ್ ವಾಜೀದ್, ಮೊಹಮ್ಮದ್ ಸಾಧಿಕ್, ವಿನಯ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published.