ಸಮರ್ಪಕ ಸಾರಿಗೆ ಸೌಲಭ್ಯಕ್ಕಾಗಿ ಆಗ್ರಹ

ದಾವಣಗೆರೆ, ಏ.15- ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರ ಬೇಡಿಕೆ ಗಳನ್ನು ಈಡೇರಿಸಿ, ವಿದ್ಯಾರ್ಥಿಗಳಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಎಸ್‌ಎಫ್‌ಐ ಜಿಲ್ಲಾ ಸಮಿತಿ ಒತ್ತಾಯಿಸಿದೆ.

ರಸ್ತೆ ಸಾರಿಗೆ ನಿಗಮಗಳು ಮತ್ತು ಬೆಂಗಳೂರು ಮಹಾನಗರ ಸಾರಿಗೆ ನಿಗಮಗಳ ನೌಕರರು  ಏ.7 ರಿಂದ ಬಸ್‌ಗಳನ್ನು ಬಂದ್ ಮಾಡುವ ಮೂಲಕ ಅನಿರ್ದಿಷ್ಟಾ ವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರ ಸಹಾನುಭೂತಿ ಯಿಂದ ಮಾತುಕತೆ ಮೂಲಕ ಪರಿಹಾರೋಪಾಯಗಳನ್ನು ಕಂಡುಕೊಳ್ಳಲು ಮುಂದಾಗದಿರುವ ಕಾರಣ, ರಾಜ್ಯದ ವಿದ್ಯಾರ್ಥಿಗಳು  ಮತ್ತು ಜನತೆ ಸಾರಿಗೆ ಸಮಸ್ಯೆಯ ಸಂಕಷ್ಟವನ್ನು ಎದುರಿಸಬೇಕಾಗಿದೆ.

ಲಕ್ಷಾಂತರ ವಿದ್ಯಾರ್ಥಿಗಳು ಬಸ್‌ಪಾಸ್ ಖರೀದಿಸಿದ್ದು, ಪರೀಕ್ಷಾ ಸಮಯ ದಲ್ಲಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ. ಖಾಸಗಿ ಬಸ್‌ಗಳಲ್ಲಿ ಮನಸೋ ಇಚ್ಛೆ ವಸೂಲಿ ಮಾಡುತ್ತಿದ್ದು, ಬಡವರಿಗೆ ಇದು ನುಂಗ ಲಾರದ ತುತ್ತಾಗಿದೆ. ಕೂಡಲೇ ಪರಿಹಾರದ ಮಾತುಕತೆ ಮೂಲಕ ನೌಕರರು ಮುಷ್ಕರ ಮುಗಿಸಿ, ಶೀಘ್ರವಾಗಿ ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ ಕಲ್ಪಿಸಬೇಕು. ಇಲ್ಲವಾದಲ್ಲಿ ಎಸ್‌ಎಫ್‌ಐ ಬೀದಿಗಿಳಿದು ಹೋರಾಟ ಮಾಡಲಿದೆ ಎಂದು ಜಿಲ್ಲಾ ಸಂಚಾಲಕರಾದ ಬಿ.ಎಂ. ಅನಂತರಾಜು, ಲಕ್ಷ್ಮಣ್ ರಮಾವತ್ ತಿಳಿಸಿದ್ದಾರೆ.

Leave a Reply

Your email address will not be published.