ಎಸ್.ಕೆ. ವೀರಣ್ಣ, ದಾವಣಗೆರೆ – ಹರಿಹರ ಅರ್ಬನ್ ಸಹಕಾರ ಬ್ಯಾಂಕ್ ಉಪಾಧ್ಯಕ್ಷ

ದಾವಣಗೆರೆ,ಏ.19- ದಾವಣಗೆರೆ – ಹರಿಹರ ಅರ್ಬನ್ ಸಹಕಾರ ಬ್ಯಾಂಕ್ ಆಡಳಿತ ಮಂಡಳಿ ಉಪಾಧ್ಯಕ್ಷರಾಗಿ ಬ್ಯಾಂಕಿನ ಹಿರಿಯ ನಿರ್ದೇಶಕರ ಲ್ಲೊಬ್ಬರಾದ ಎಸ್.ಕೆ. ವೀರಣ್ಣ ಅವರು ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ.

ಬ್ಯಾಂಕಿನ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿ ಸುತ್ತಿದ್ದ ಕಿರುವಾಡಿ ವಿ. ಸೋಮಣ್ಣ ಅವರು ನೀಡಿದ ರಾಜೀನಾಮೆಯಿಂದಾಗಿ ತೆರವಾದ ಸ್ಥಾನಕ್ಕೆ ಬ್ಯಾಂಕಿನ ಸಭಾಂಗಣದಲ್ಲಿ ಇಂದು ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು. 

ಎಸ್.ಕೆ. ವೀರಣ್ಣ ಅವರ ಹೆಸರನ್ನು ಬ್ಯಾಂಕಿನ ನಿರ್ದೇಶಕರಾದ ರಮಣ್  ಲಾಲ್ ಪಿ. ಸಂಘವಿ ಅವರು ಸೂಚಿಸಿದರೆ, ಮತ್ತೋರ್ವ ನಿರ್ದೇಶಕರಾದ ಶ್ರೀಮತಿ ಜಯಮ್ಮ ಪರಶುರಾಮಪ್ಪ ಅವರು ಅನುಮೋದಿಸಿದರು.

ಆಯ್ಕೆ ಪ್ರಕ್ರಿಯೆ ನಂತರ ನಡೆದ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಕ್ಷ ಎನ್.ಎ. ಮುರುಗೇಶ್, ಎಸ್.ಕೆ. ವೀರಣ್ಣ ಅವರನ್ನು ಅಭಿನಂದಿಸಿದರಲ್ಲದೇ, ಬ್ಯಾಂಕಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ವೀರಣ್ಣ ಅವರ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಬ್ಯಾಂಕಿನ ನಿರ್ದೇಶಕರುಗಳಾದ ರಮಣ್ ಲಾಲ್ ಪಿ.ಸಂಘವಿ, ಎಸ್.ಕೆ. ವೀರಣ್ಣ, ಎ.ಹೆಚ್. ಕುಬೇರಪ್ಪ, ಶ್ರೀಮತಿ ಜಯಮ್ಮ ಪರಶುರಾಮಪ್ಪ, ಶಂಕರ್ ಖಟಾವ್ ಕರ್, ಎಸ್.ಕೆ. ಪ್ರಭು ಪ್ರಸಾದ್, ಶ್ರೀಮತಿ ಶಶಿಕಲಾ ರುದ್ರಯ್ಯ, ಕೆ.ಎಂ. ಜ್ಯೋತಿ ಪ್ರಕಾಶ್, ಪಿ.ಹೆಚ್. ವೆಂಕಪ್ಪ, ಬಿ.ನಾಗೇಂದ್ರಚಾರಿ, ಕೆ.ಹೆಚ್. ಶಿವಯೋಗಪ್ಪ, ಶ್ರೀಮತಿ ಅನಿಲ ಇಂದೂಧರ್ ನಿಶಾನಿಮಠ, ಆರ್.ವಿ. ಶಿರಸಾಲಿಮಠ್, ಕಿರಣ್ ಶೆಟ್ಟಿ, ವಿಶೇಷ ಆಹ್ವಾನಿತರಾದ ಜಿ.ಕೆ. ವೀರಣ್ಣ, ಶ್ರೀಮತಿ ಉಮಾ ವಾಗೇಶ್, ವ್ಯವಸ್ಥಾಪನಾ ಮಂಡಳಿಯ ಸದಸ್ಯರುಗಳಾದ ಕೆ.ಎಂ. ಬಸವರಾಜ್, ಶ್ರೀಮತಿ ಜೆ.ಸಿ. ವಸುಂದರಾ, ಶ್ರೀಮತಿ ಕೆ.ಎಂ. ಶೈಲಾ ಅವರುಗಳು ಸಭೆಯಲ್ಲಿ ಉಪಸ್ಥಿತರಿದ್ದರು.

 ಪ್ರಧಾನ ವ್ಯವಸ್ಥಾಪಕ ಎಂ. ಶಿವಲಿಂಗಸ್ವಾಮಿ ಅವರು ಸಭೆಯ ಕಾರ್ಯಕಲಾಪವನ್ನು ನಿರ್ವಹಿಸಿದರು.