ಅರಸೀಕೆರೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಂಸದರ ದಿಢೀರ್ ಭೇಟಿ

ಅರಸೀಕೆರೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಂಸದರ ದಿಢೀರ್ ಭೇಟಿ

ಹರಪನಹಳ್ಳಿ, ಮೇ 1- ತಾಲ್ಲೂಕಿನ ಅರಸೀಕೆರೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಆಸ್ಪತ್ರೆಯಲ್ಲಿ ಸ್ಯಾನಿಟೈಸರ್ ವ್ಯವಸ್ಥೆ,  ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಇಲ್ಲದ ಕಾರಣ ಅಧಿಕಾರಿಗಳ ಮೇಲೆ ಗರಂ ಆದರು. 

ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ, ತಾಲ್ಲೂಕು ವೈದ್ಯಾಧಿಕಾರಿಗಳಿಗೆ ದೂರು ನೀಡಿದರಲ್ಲದೆ,  ಅರಸೀಕೆರೆಯಲ್ಲಿ ಕೂಡಲೇ ತಾಲ್ಲೂಕು ವೈದ್ಯಾಧಿಕಾರಿಗಳನ್ನು ಕರೆಸಿ, ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಿದೆ. 

ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ  ಸಿಬ್ಬಂದಿಗಳು ಕರ್ತವ್ಯದಲ್ಲಿರಬೇಕು.ಔಷಧಿಗಳನ್ನು ಸಂಗ್ರಹಣೆ ಮಾಡಿಕೊಳ್ಳಬೇಕು. 

ಆಕ್ಸಿಜನ್ ಕೊಠಡಿಗಳನ್ನು ಬೇಗ ಪೂರ್ಣಗೊಳಿಸಬೇಕು. ಕರ್ತವ್ಯಲೋಪವೆಸಗುವವರನ್ನು ಕೂಡಲೇ ಬೇರೆ ಕಡೆಗೆ ವರ್ಗಾವಣೆ ಮಾಡಿ ಎಂದು ಸಂಸದ ವೈ. ದೇವೇಂದ್ರಪ್ಪ ತಾಕೀತು ಮಾಡಿದರು. 

ಈ ಸಂದರ್ಭದಲ್ಲಿ ತಾಲ್ಲೂಕು ವೈದ್ಯಾಧಿಕಾರಿ ವೆಂಕಟೇಶ್, ಮುಖಂಡರಾದ ಯರಬಳ್ಳಿ ಉಮಾಪತಿ, ಪುಣಭಘಟ್ಟ ಬಾಲಚಂದ್ರಯ್ಯ, ಸತೀಶ್, ಪೂಜಾರ್ ಮರಿಯಪ್ಪ ಹಾಗೂ  ಕೊಟ್ರೇಶ್ ಹಾಜರಿದ್ದರು.