ಸಾಧನೆಯಿಂದ ಕೆನರಾ ಬ್ಯಾಂಕ್ ಸಮಾಜ ಸೇವೆ

ಸಾಧನೆಯಿಂದ ಕೆನರಾ ಬ್ಯಾಂಕ್ ಸಮಾಜ ಸೇವೆ

ಬ್ಯಾಂಕಿನ ಸಹಾಯಕ ಮಹಾ ಪ್ರಬಂಧಕ ಹೆಚ್.ರಘುರಾಜ

ದಾವಣಗೆರೆ, ಜೂ.10 – ಕೆನರಾ ಬ್ಯಾಂಕ್ ತನ್ನ ಲಾಭದಲ್ಲಿ ಒಂದಿಷ್ಟು ಪಾಲನ್ನು ಸಮಾಜಕ್ಕಾಗಿ ಅರ್ಪಣೆ ಮಾಡುವುದರ ಮೂಲಕ ಸಮಾಜ ಸೇವೆ ಮಾಡುತ್ತಿದೆ ಎಂದು ಕೆನರಾ ಬ್ಯಾಂಕಿನ ದಾವಣಗೆರೆ ಕ್ಷೇತ್ರೀಯ ಕಾರ್ಯಾಲಯದ ಸಹಾಯಕ ಮಹಾ ಪ್ರಬಂಧಕ ಹೆಚ್.ರಘುರಾಜ ಹೇಳಿದರು‌. 

ಜಿಲ್ಲಾ ಚಿಗಟೇರಿ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಕೊರೊನಾ ಸಂತ್ರಸ್ತರಿಗೆ, ಸಂತ್ರಸ್ತರ ಪರಿಚಾ ರಕರಿಗೆ, ಕೊರೊನಾ ವಾರಿಯರ್ಸ್‌ಗಳಿಗಾಗಿ ಕೆನರಾ ಬ್ಯಾಂಕ್ ವತಿಯಿಂದ ಇಂದು ಆಯೋಜಿಸಿದ್ದ ಎರಡನೇ ದಿನದ ಉಚಿತ ಆಹಾರ ಸೇವೆಗೆ ಚಾಲನೆ ನೀಡಿ ಮಾತನಾಡುತ್ತಿದ್ದರು. 

ಲೀಡ್ ಬ್ಯಾಂಕ್ ವಿಭಾಗೀಯ ಪ್ರಬಂಧಕ ಸುಶ್ರುತ್ ಡಿ ಶಾಸ್ತ್ರಿ ಮಾತನಾಡಿದರು. ಲೀಡ್ ಬ್ಯಾಂಕ್ ವಿಭಾಗೀಯ ಪ್ರಬಂಧಕ ಸುಶ್ರುತ್ ಡಿ ಶಾಸ್ತ್ರಿ,  ಚಿಗಟೇರಿ ಜಿಲ್ಲಾಸ್ಪತ್ರೆಯ ನಿವಾಸಿ ವೈದ್ಯಾಧಿ ಕಾರಿ ಡಾ.ಮಂಜುನಾಥ ಪಾಟೀಲ್, ಜಿಲ್ಲಾಸ್ಪತ್ರೆಯ ಫಾರ್ಮಾಸಿಸ್ಟ್ ಶ್ರೀನಿವಾಸ ಮಠದ್,  ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಕೆ‌.ರಾಘವೇಂದ್ರ ನಾಯರಿ, ಕೆನರಾ ಬ್ಯಾಂಕ್ ಹಿರಿಯ ಅಧಿಕಾರಿಗಳಾದ ಎಸ್.ವಿ.ರಾಮಕೃಷ್ಣ ನಾಯ್ಕ್, ಬಿ.ಎ.ಸುರೇಶ್, ಕೆ.ಶಶಿಕುಮಾರ್,  ಕೆ.ವಿಶ್ವನಾಥ ಬಿಲ್ಲವ, ಸಿ.ಪರಶುರಾಮ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.