ದಾವಣಗೆರೆಗೆ ಸರ್ಕಾರಿ ಮೆಡಿಕಲ್ ಕಾಲೇಜು : ಸ್ವಾಗತ

ದಾವಣಗೆರೆ, ಜೂ.30- ನಗರದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಪ್ರಾರಂಭಿಸುವ ಬಗ್ಗೆ ಸರ್ಕಾರದ ನಿರ್ಧಾರವನ್ನು ಹಿರಿಯ ಶಾಸಕ  ಶಾಮನೂರು ಶಿವಶಂಕರಪ್ಪ ಸ್ವಾಗತಿಸಿದ್ದಾರೆ.

ಸರ್ಕಾರಿ ಮೆಡಿಕಲ್ ಕಾಲೇಜು ಆರಂಭವಾಗುವುದರಿಂದ ದಾವಣಗೆರೆ ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅನುಕೂಲವಾಗ ಲಿದೆ ಎಂದು ಅವರು ತಿಳಿಸಿದ್ದಾರೆ.

ಸರ್ಕಾರ ಆದಷ್ಟು ಶೀಘ್ರವಾಗಿ ದಾವಣಗೆರೆಯಲ್ಲಿ ಮೆಡಿಕಲ್ ಕಾಲೇಜು ಆರಂಭಿಸುವಂತೆ ಒತ್ತಾಯಿಸಿರುವ ಅವರು ಮೆಡಿಕಲ್ ಕಾಲೇಜು ಆರಂಭಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದ್ದಾರೆ.