10 ಪಾಸಿಟಿವ್, 10 ಗುಣಮುಖ

ದಾವಣಗೆರೆ, ಆ.20- ಜಿಲ್ಲೆಯಲ್ಲಿ ಶುಕ್ರವಾರ 10 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಒಬ್ಬರು ಮೃತಪಟ್ಟಿದ್ದಾರೆ. 10 ಜನ ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 5, ಹರಿಹರ 1, ಚನ್ನಗಿರಿ  3,ಹಾಗೂ ಹೊರ ಜಿಲ್ಲೆಯ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ 208 ಸಕ್ರಿಯ ಪ್ರಕರಣಗಳಿವೆ.