ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಸೈಕ್ಲೋಥಾನ್

ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಸೈಕ್ಲೋಥಾನ್

ದಾವಣಗೆರೆ,ಅ.1- ಆಜಾದಿ ಕಾ ಅಮೃತ ಮಹೋತ್ಸವದಡಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ (ಎನ್.ಸಿ.ಡಿ ವಿಭಾಗ), ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ಹಾಗೂ ಜಿಲ್ಲಾ ಯೋಗ ಒಕ್ಕೂಟ, ಇವರುಗಳ ಸಂಯುಕ್ತಾಶ್ರಯದಲ್ಲಿ ಎಲ್ಲಾ ವಯೋಮಾನದವರಿಗೆ ಡಿಜಿಟಲ್ ಸಮಾನತೆ ಎಂಬ ಘೋಷವಾಕ್ಯದಡಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸೈಕ್ಲೋಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿ.ಪಂ. ಸಿಇಒ ವಿಜಯ ಮಹಾಂತೇಶ, ಎಸ್ಪಿ ಸಿ.ಬಿ.ರಿಷ್ಯಂತ್, ಡಿಹೆಚ್‍ಒ ಡಾ.ನಾಗರಾಜ್, ಜಿಲ್ಲಾ ಸರ್ಜನ್ ಡಾ.ಜಯಪ್ರಕಾಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್, ಡಾ.ಯತೀಶ್, ಸ್ಮಾರ್ಟ್ ಸಿಟಿ ಎಂ.ಡಿ ರವೀಂದ್ರ ಮಲ್ಲಾಪುರ, ಹೆಚ್.ಬಿ.ಮಂಜುನಾಥ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.