ಕಿಸಾನ್ ಕಾಂಗ್ರೆಸ್‌ನಿಂದ ಪಂಜಿನ ಮೆರವಣಿಗೆ

ಕಿಸಾನ್ ಕಾಂಗ್ರೆಸ್‌ನಿಂದ ಪಂಜಿನ ಮೆರವಣಿಗೆ

ರೈತರ ಹತ್ಯೆಗೆ ಖಂಡನೆ

ದಾವಣಗೆರೆ, ಅ.4- ಉತ್ತರ ಪ್ರದೇಶದಲ್ಲಿ ನಡೆದ ರೈತರ ಹತ್ಯೆ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ವಾದ್ರಾ ಅವರ ಬಂಧನ ಖಂಡಿಸಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ವತಿ ಯಿಂದ ನಗರದಲ್ಲಿ ಇಂದು ಸಂಜೆ ಪಂಜಿನ ಮೆರ ವಣಿಗೆ ಮೂಲಕ ಪ್ರತಿಭಟನೆ ನಡೆಸಲಾಯಿತು.

ಜಯದೇವ ವೃತ್ತದಲ್ಲಿ ಅಧ್ಯಕ್ಷ ಬಸವರಾಜು ವಿ. ಶಿವಗಂಗಾ ನೇತೃತ್ವದಲ್ಲಿ ಪಂಜಿನ ಬೆಳಕು ಪ್ರದರ್ಶಿಸುತ್ತಾ, ಹತ್ಯೆ ಹಾಗೂ ಬಂಧನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರೈತರ ಸಾವಿಗೆ ಕಾರ ಣರಾದವರನ್ನು ಕೂಡಲೇ ಬಂಧಿಸಿ, ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಕೃಷಿ ಕಾನೂನು ರದ್ಧತಿಗಾಗಿ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಮತ್ತು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಮೌರ್ಯ ಭೇಟಿ ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರನ ಕಾರು ಹರಿದು ನಾಲ್ವರು ರೈತರು ಸೇರಿ 8 ಮಂದಿ ಕೊಲೆಯಾಗಿದೆ. 

ಈ ಘಟನೆ ದೇಶದ ಘೋರ ದುರಂತ. ಮೃತ ರೈತ ಕುಟುಂಬಗಳಿಗೆ ಸಾಂತ್ವನ ಹೇಳಲು ಹೋದ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯರಾದ ದೀಪಿಂದರ್ ಸಿಂಗ್ ಅವರನ್ನು ಬಂಧಿಸಿರುವುದು ಎಷ್ಟು ಸರಿ ಎಂದು ಬಸವರಾಜು ವಿ. ಶಿವಗಂಗಾ ಅವರು ಅಸಮಾಧಾನ ವ್ಯಕ್ತಪಡಿಸಿದರು.

 ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಎಸ್.ಕೆ. ಪ್ರವೀಣ್ ಕುಮಾರ್, ಜಿಕ್ರಿಯಾ, ಹಾಲೇಶ್ ಬಸವನಾಳು, ಸುರೇಶ್ ಜಾಧವ್, ಮಾಲೇಶ್ ಸೇರಿದಂತೆ ಕಿಸಾನ್ ಕಾಂಗ್ರೆಸ್‌ನ ಮುಖಂಡರು, ಕಾರ್ಯಕರ್ತರು ಇದ್ದರು.