ಡಾ. ಸುರೇಶ್ ಹನಗವಾಡಿ ಅವರಿಗೆ ಸನ್ಮಾನ

ಡಾ. ಸುರೇಶ್ ಹನಗವಾಡಿ ಅವರಿಗೆ ಸನ್ಮಾನ

ದಾವಣಗೆರೆ, ಡಿ.1 – ನಗರದ ಜ.ಜ.ಮು ವೈದ್ಯ ಕೀಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಿನ್ನೆ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಹಿಮೋಫಿ ಲಿಯಾ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ ಕರ್ನಾಟಕ ಸರ್ಕಾರದಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ. ಸುರೇಶ್ ಹನಗವಾಡಿ ಅವರನ್ನು ಸನ್ಮಾನಿಸಲಾಯಿತು.

ಬಾಪೂಜಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ರಾದ ಶ್ರೀಮತಿ ಕಿರುವಾಡಿ ಗಿರಿಜಮ್ಮ, ಶೈಕ್ಷಣಿಕ ಸಲಹೆಗಾರರಾದ ಡಾ. ಎಂ.ಜಿ. ಈಶ್ವರಪ್ಪ, ಜಜಮು ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎಸ್.ಬಿ. ಮುರುಗೇಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.