ಡಾ. ಅಂಬೇಡ್ಕರ್ ಅವರಿಗೆ ಅಪಮಾನ : ಗಡೀಪಾರು ಮಾಡಲು ಆಗ್ರಹ

ದಾವಣಗೆರೆ, ಜ. 28- ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅಪಮಾನ ಮಾಡಿದರೆನ್ನಲಾದ ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡರನ್ನು ಸೇವೆಯಿಂದ ಅಮಾನತ್ತುಗೊಳಿಸಿ, ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಗಡೀಪಾರು ಮಾಡುವಂತೆ ಮಾನವ ಹಕ್ಕುಗಳ ಹೋರಾಟ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್. ತಿಮ್ಮಣ್ಣ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.  

ನ್ಯಾ. ಮಲ್ಲಿಕಾರ್ಜುನಗೌಡ ಅವರು ಅಂಬೇಡ್ಕರ್ ಅವರ ಭಾವಚಿತ್ರ ವನ್ನು ತೆಗೆದಲ್ಲಿ ಮಾತ್ರ ಧ್ವಜಾರೋಹಣ ಮಾಡುವುದಾಗಿ ಹೇಳಿದ್ದಾರೆ. ಇದು ಅಂಬೇಡ್ಕರ್ ಅವರಿಗೆ ಮಾಡಿದ ದೊಡ್ಡ ಅಪಮಾನ.  ಇದು ನ್ಯಾಯಾ ಧೀಶರ ಜಾತಿವಾದಿ ಮನಸ್ಥಿತಿಯನ್ನು ತೋರ್ಪಡಿಸುತ್ತದೆ. ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವ ಇವರ ದಲಿತ ವರ್ಗಕ್ಕೆ ಯಾವ ರೀತಿ ನ್ಯಾಯ ನಿರೀಕ್ಷಿಸಲು ಸಾಧ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.