ಹರಪನಹಳ್ಳಿ : ಲಿಂ. ಶ್ರೀ ಪುಣ್ಯಾನಂದ ಪುರಿ ಮಹಾ ಸ್ವಾಮೀಜಿಯವರು ರಾಜನಹಳ್ಳಿಯ ವಾಲ್ಮೀಕಿ ಗುರು ಪೀಠವನ್ನು ಕಟ್ಟಿ ಬೆಳೆಸಿ, ರಾಜ್ಯದ ವಾಲ್ಮೀಕಿ ನಾಯಕ ಜನಾಂಗದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಮಹಾ ತಪಸ್ವಿ ಎಂದು ಕರ್ನಾಟಕ ಲೋಕ ಸೇವಾ ಅಯೋಗದ ಮಾಜಿ ಸದಸ್ಯ ಜಿ.ಟಿ. ಚಂದ್ರಶೇಖರಪ್ಪ ಶ್ಲ್ಯಾಘಿಸಿದರು.
ಹರಿಹರದಲ್ಲಿ 7-8 ರಂದು ಅದ್ಧೂರಿ ತುಂಗಾರತಿ
ಕೋಡಿಯಾಲ ಹೊಸಪೇಟೆ ಗ್ರಾಮದ ತುಂಗಭದ್ರಾ ನದಿ ದಂಡೆಯ ಮೇಲಿರುವ ತಪೋಕ್ಷೇತ್ರ ಪುಣ್ಯಕೋಟಿ ಮಠದ ಆವರಣದಲ್ಲಿ ಗಂಗಾರತಿ ಮಾದರಿಯಲ್ಲಿ ಇದೇ ದಿನಾಂಕ 7-8 ರಂದು 3 ನೇ ವರ್ಷದ ತುಂಗಾರತಿ ಕಾರ್ಯಕ್ರಮ ಶ್ರೀ ರಂಭಾಪುರಿ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಅದ್ಧೂರಿಯಾಗಿ ಜರುಗಲಿದೆ
ದಾವಣಗೆರೆ-ಹರಿಹರ ಅರ್ಬನ್ ಸಹಕಾರಿಗೆ 8.60 ಕೋಟಿ ರೂ. ಲಾಭ
ಸುವರ್ಣ ಮಹೋತ್ಸವದ ಸಂಭ್ರ ಮದಲ್ಲಿರುವ ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಬ್ಯಾಂಕುಗಳಲ್ಲೊಂದಾದ ದಾವಣಗೆರೆ - ಹರಿಹರ ಅರ್ಬನ್ ಸಹಕಾರ ಬ್ಯಾಂಕ್, 2022 ಮಾರ್ಚ್ ಅಂತ್ಯಕ್ಕೆ 8.62 ಕೋಟಿ ರೂ. ಲಾಭ ಗಳಿಸಿರುವ ಬಗ್ಗೆ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಕ್ಷ ಎನ್.ಎ. ಮುರುಗೇಶ್ ಸಂತಸ ವ್ಯಕ್ತಪಡಿಸಿದ್ದಾರೆ.
ನವಜಾತ ಶಿಶು ಕಳವು ಪ್ರಕರಣದ ಅಹೋರಾತ್ರಿ ಧರಣಿ ತಾತ್ಕಾಲಿಕ ಹಿಂಪಡೆ
ನಗರದ ನಗರದ ಹಳೇ ಸರ್ಕಾರಿ ಮಹಿಳಾ ಹೆರಿಗೆ ಆಸ್ಪತ್ರೆಯಲ್ಲಿ ಕಳೆದ 15 ದಿನಗಳ ಹಿಂದೆ ನವಜಾತ ಶಿಶು ಕಳುವಾಗಿರುವ ಪ್ರಕರಣ ಖಂಡಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನಡೆಸಲಾಗುತ್ತಿದ್ದ ಅಹೋರಾತ್ರಿ ಧರಣಿಯನ್ನು ಇಂದು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ.
5 ಕೋ. ಮೌಲ್ಯದ ಪಾಲಿಕೆ ಜಾಗ ಕಬಳಿಸಲು ಬಿಜೆಪಿ ಸಂಚು
ನಾಗರಿಕರ ಹಿತರಕ್ಷಣೆಗಾಗಿ ಮೀಸಲಿಟ್ಟಿದ್ದ ನಗರ ಪಾಲಿಕೆಗೆ ಸೇರಿದ 25 ಕೋಟಿ ರೂ. ಮೌಲ್ಯದ ನಿವೇಶನವನ್ನು ಜಿಲ್ಲಾ ಬಿಜೆಪಿ ಕಾರ್ಯಾಲಯಕ್ಕೆ ಮಂಜೂರು ಮಾಡಿಸಿಕೊಂಡು ಜಾಗ ಕಬಳಿಸಲು ಬಿಜೆಪಿಯವರು ತೆರೆಮರೆ ಕಸರತ್ತು ನಡೆಸುತ್ತಿದ್ದು, ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ